ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ನೀಡಿರುವ ಅನುಮತಿಯನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದು, ಕೋರ್ಟ್ ವಿಚಾರಣೆಯನ್ನು ಇಂದು (ಆಗಸ್ಟ್ 31) ಮಧ್ಯಾಹ್ನ 2:30ಕ್ಕೆ ಮುಂದೂಡಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ಬಳಿಕ ಅರ್ಜಿಯ ವಿಚಾರಣೆಯನ್ನು ಮಧ್ಯಾಹ್ನ 2:30ಕ್ಕೆ ಮುಂದೂಡಿ ಆದೇಶಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸುತ್ತಿದ್ದಾರೆ. ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸ್ನೇಹಮಯಿ ಕೃಷ್ಣ ಪರ ಮಾಜಿ ಅಡಿಷನಲ್ ಸಾಲಿಸಿಟರ್ ಜನರಲ್ ಮಣಿದರ್ ಸಿಂಗ್ ವಾದ ಮಂಡಿಸುತ್ತಿದ್ದಾರೆ.