ನ್ಯೂಸ್

ಪೋಕ್ಸೋ ಕೇಸ್​ನಲ್ಲಿ ಮಾಜಿ ಸಿಎಂ ಬಿಎಸ್​ವೈಗೆ ಬಿಗ್ ರಿಲೀಫ್

ಧಾರವಾಡ: ಅಪ್ರಾಪ್ತ ವಯಸ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪಗೆ ಧಾರವಾಡ ಹೈಕೋರ್ಟ್ ಬಿಗ್​ ರಿಲೀಫ್ ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಇಂದು ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದರಿಂದ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಪ್ರಕರಣದ ಹಿನ್ನೆಲೆ? 

ಅಪ್ರಾಪ್ತ ವಯಸ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ  ಸದಾಶಿವನಗರ ಠಾಣಾ ಪೊಲೀಸರು 2024ರ ಮಾ.14ರಂದು ಎಫ್​ಐಆರ್ ದಾಖಲಿಸಿದ್ದರು. ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶಿಸಿತ್ತು.  ಅದನ್ನು ರದ್ದುಪಡಿಸಲು ಕೋರಿ ಯಡಿಯೂರಪ್ಪ ಅವರು 2024ರ ಜೂ.13ರಂದು ಹೈಕೊರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಜೂ.14ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಪ್ರಕರಣದ ತನಿಖೆಗೆ ತಡೆ ನೀಡಲು ನಿರಾಕರಿಸಿತ್ತಾದರೂ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಸಿಐಡಿ ತನಿಖಾಧಿಕಾರಿಗಳಿಗೆ ಸೂಚಿಸಿತ್ತು.

ವಿಚಾರಣೆಗೆ ಖುದ್ದು ಹಾಜರಾಗುವುದರಿಂದ ಯಡಿಯೂರಪ್ಪ ಅವರಿಗೆ ವಿನಾಯ್ತಿ ನೀಡಿ, 2024ರ ಜು.12ರಂದು ಹೈಕೋರ್ಟ್‌ ಮತ್ತೊಂದು ಆದೇಶ ಮಾಡಿತ್ತು. ಅಂತಿಮವಾಗಿ 2025ರ ಜ.17ರಂದು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನನ್ನು ಕೋರ್ಟ್ ನೀಡಿದ್ದು, ಬಿಎಸ್​ವೈಗೆ ಬಿಗ್ ರಿಲೀಫ್​ ಸಿಕ್ಕಂತಾಗಿದೆ.