ಬೆಂಗಳೂರು: ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಬಿಜೆಪಿ ಶಾಸಕ (BJP MLA) ಮುನಿರತ್ನಗೆ ಕೋರ್ಟ್ (Court) ಬಿಗ್ ರಿಲೀಫ್ ನೀಡಿದ್ದು, ಜಾಮೀನು (Bail) ಮಂಜೂರು ಮಾಡಿದೆ.
ರಾಮನಗರ ಜಿಲ್ಲೆ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ (Rape) ಹಾಗೂ ಹನಿಟ್ರ್ಯಾಪ್ (HoneyTrap) ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ (BJP MLA) ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿ: ಜೈಲಲ್ಲಿದ್ದುಕೊಂಡೇ ಗ್ಯಾಂಗ್ ಆಪರೇಟ್ ಮಾಡ್ತಿರೋ Lawrence Bishnoi ಯಾರು? ಸಲ್ಲುಗೂ ಈತನಿಗೂ ವೈರತ್ವ ಬೆಳೆಯಲು ಕಾರಣವೇನು
ಗುತ್ತಿಗೆದಾರರೊಬ್ಬರಿಗೆ ಬೆದರಿಕೆ (Threatening) ಹಾಗೂ ಜಾತಿ ನಿಂದನೆ (Attrocity) ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ (BJP MLA) ಮುನಿರತ್ನರನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಜೈಲು ವಾಸ ಅನುಭವಿಸಿ ಜಾಮೀನು ಸಿಕ್ಕರೂ ಮುನಿರತ್ನಗೆ ಬಿಡುಗಡೆ ಭಾಗ್ಯ ಸಿಕ್ಕಿರಲಿಲ್ಲ. ಬೆದರಿಕೆ (Threatening) ಹಾಗೂ ಜಾತಿ ನಿಂದನೆ (Attrocity) ಪ್ರಕರಣದಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನರನ್ನು ಪೊಲೀಸರು ಬಂಧಿಸಿದ್ದರು.
ಬಿಜೆಪಿ ಶಾಸಕ (BJP MLA) ಮುನಿರತ್ನ ನನ್ನ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ. ಇದಲ್ಲದೆ ತಮ್ಮ ವಿರೋಧಿಗಳನ್ನು ಹಣಿಯಲು ಹನಿಟ್ರ್ಯಾಪ್‌ಗಾಗಿ ನನ್ನನ್ನು ಬಳಕೆ ಮಾಡಿಕೊಂಡಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮುನಿರತ್ನ ಅವರನ್ನು ಬಂಧನ ಮಾಡಲಾಗಿತ್ತು. ಈ ವಿಚಾರವನ್ನು ತನಿಖೆ ಮಾಡಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು (SIT) ರಚಿಸಿತ್ತು.