ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಮ್ ಬ್ಲ್ಯಾಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ಬಾಸ್ (BiggBoss) ಸೀಸನ್ 10ರ ಸ್ಫರ್ಧಿ ಡ್ರೋನ್ ಪ್ರತಾಪ್ಗೆ (hap) ಮಧುಗಿರಿ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ವಿಜ್ಞಾನ ಪ್ರಯೋಗದ ಹೆಸರಿನಲ್ಲಿ ವಿಡಿಯೋವೊಂದನ್ನ ಪೋಸ್ಟ್ ಮಾಡಿದ್ದ ಪ್ರತಾಪ್ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಜನಕಲೋಟಿಯ ಕೃಷಿ ಹೊಂಡದಲ್ಲಿ ಸೋಡಿಯಮ್ ಎಸೆದು ಅದು ಬ್ಲಾಸ್ಟ್ ಆಗುವ ವಿಡಿಯೋ ಮಾಡಿದ್ದರು. ಬಳಿಕ ಇದನ್ನು ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಮಾಡಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದರು.
ವಿಡಿಯೋ ವೈರಲ್ ಆಗುತ್ತಿದ್ದಂತೆ ಸುಮೊಟೋ ಪ್ರಕರಣ ದಾಖಲಿಸಿಕೊಂಡ ಮಿಡಿಗೇಶಿ ಪೊಲೀಸರು ಪ್ರತಾಪ್ರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವೂ ಡಿಸೆಂಬರ್ 26ರವರೆಗೆ ಪ್ರತಾಪ್ಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಪೊಲೀಸರು ಪ್ರತಾಪ್ರನ್ನು ಮಧುಗಿರಿ ಜೈಲಿನಲ್ಲಿ ಇರಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಪ್ರತಾಪ್ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಬೇಲ್ ಮಂಜೂರು ಮಾಡಿದೆ. ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.