ನ್ಯೂಸ್

ರಾಜ್ಯದಲ್ಲಿ Covid 19 ಏರಿಕೆ ಪ್ರಕರಣ; ಕರೊನಾ ಎದುರಿಸಲು ಅಗತ್ಯಗಳನ್ನು ಸಿದ್ಧಪಡಿಸಿಟ್ಟುಕೊಳ್ಳಿ: CM ಸಿದ್ದರಾಮಯ್ಯ ಸೂಚನೆ

Covid 19: ಸದ್ಯಕ್ಕೆ ಕರೊನಾ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಸಚಿವರು ಸೇರಿದಂತೆ ಅಧಿಕಾರಿಗಳೊಂದಿಗೆ ಸೋಮವಾರ ನಡೆದ ಸಭೆಯಲ್ಲಿ ಅಧಿಕಾರಿಗಳು, ತಜ್ಞರು ಮತ್ತು ಸಚಿವರುಗಳಿಂದ ಮಾಹಿತಿ ಪಡೆದು ಸೂಚನೆಗಳನ್ನು ನೀಡಿದರು.

ಕರೊನಾ ಸದ್ಯಕ್ಕೆ ಗಂಭೀರ ಪರಿಸ್ಥಿತಿಗೆ ತಲುಪಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು. ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಬೇಕು. ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು ಎಂದು ಹೇಳಿದರು.

ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು. ತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಉತ್ತಮ. ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ವಾಪಾಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು.ಎಂತಹುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರಬೇಕು ಎಂದು ಸಿಎಂ ಸೂಚಿದರು.

ರಾಜ್ಯದಲ್ಲಿ 62 ಪ್ರಕರಣಗಳು

ಕರೊನಾ ಪ್ರಕರಣಗಳು ಅಲ್ಲಲ್ಲಿ ಒಂದೊ - ಎರಡು ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದ್ದು ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ.

ಕರೊನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮ

ಬಾಣಂತಿ ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕರೊನಾ ಸಹಾಯವಾಣಿ ಪ್ರಾರಂಭಿಸಬೇಕು. ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು ಪ್ರಾರಂಭಿಸಬೇಕು.ಕರೊನಾ ವಿಷಯದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ಅನುಸರಿಸಬಾರದು. ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಆಸ್ಪತ್ರೆಗಳೂ ಸರ್ವ ಸನ್ನದ್ಧವಾಗಿ ಇರಬೇಕು.

ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಬೇಕು. ರೂಪಾಂತರಿ ಕೊರೊನಾ ವೈರಾಣುವಿಗೆ ಸಂಬಂಧಿಸಿದಂತೆ ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆಯಾಗಿ ವ್ಯಾಕ್ಸಿನ್ ಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಸಾಮಾಜಿಕ ಮಾಧ್ಯಮಗಳ ಮೂಲಕ ಕಾಲ ಕಾಲಕ್ಕೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು.

ಕೇಂದ್ರದ ಅಧಿಕಾರಿಗಳ ಜತೆ ನಮ್ಮ ಅಧಿಕಾರಿಗಳು ಸಂಪರ್ಕ ಇದ್ದಾರೆ. ಅವರು ಎಲ್ಲಾ ಚರ್ಚೆ ಮಾಡ್ತಿದ್ದಾರೆ. ಈಗ ಆಕ್ಸಿಜನ್, ವೆಂಟಿಲೇಟರ್, ಬೆಡ್ಎಲ್ಲಾ ಇದೆ. ಯಾವ ರೀತಿ ನೋಡಿಕೊಳ್ಳಬೇಕು ಅಂತ ಗೊತ್ತಿದೆ. ಹಾಗಾಗಿ ಮುನ್ನೆಚ್ಚರಿಕೆ ಬಿಟ್ಟು ಯಾವುದೇ ಕ್ರಮ ಇಲ್ಲ. | ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ. ​ https://www.vijayavani.net/crpf-jawan-accused-of-spying-for-pakistan-accused-remanded-in-nia-custody-till-june https://www.vijayavani.net/saved-h-gangulys-family-narrowly-escapes-after-boat-capsizes-in