ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 8324 ಹೊಸ ಕರೊನಾ ಪ್ರಕರಣಗಳೂ ಪತ್ತೆಯಾಗಿದ್ದು, 8,110 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 115 ಸೋಂಕಿತರು ಜೀವ ಕಳೆದುಕೊಂಡಿದ್ದಾರೆ.
ಒಂದು ದಿನದಲ್ಲಿ ಸೋಂಕಿನಿಂದ ಚೇತರಿಸಿಕೊಂಡು, ಡಿಸ್ಚಾರ್ಜ್ ಆಗುತ್ತಿರುವವರ ಪ್ರಮಾಣವೂ ಹೆಚ್ಚುತ್ತಿರುವುದು ಸ್ವಲ್ಪ ಮಟ್ಟಿಗೆ ನಿರಾಳತೆ ತಂದಿದೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 3,27,076ಕ್ಕೆ ಏರಿಕೆಯಾಗಿದೆ. ಅದರಲ್ಲಿ 2,35,128 ಮಂದಿ ಚೇತರಿಸಿಕೊಂಡು, ಡಿಸ್ಚಾರ್ಜ್ ಆಗಿದ್ದಾರೆ. ಸಾವಿನ ಸಂಖ್ಯೆ 5483ಕ್ಕೆ ತಲುಪಿದ್ದು, ಸಕ್ರಿಯ ಪ್ರಕರಣಗಳು 86,446 ಎಂದು ಆರೋಗ್ಯ ಇಲಾಖೆ ತಿಳಿಸಿದೆ.