ಬೆಂಗಳೂರು: ರಾಜ್ಯದಲ್ಲಿ ಸೋಮವಾರ 36 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 100ಕ್ಕೆ ಏರಿಕೆಯಾಗಿದೆ.
ಕೋವಿಡ್ ವೈರಾಣು ಪತ್ತೆ ಸಂಬಂಧ ಕಳೆದ 24 ಗಂಟೆಗಳಲ್ಲಿ 361ಆರ್‌ಟಿ ಪಿಸಿಆರ್ ಸೇರಿ 381 ಮಾದರಿಗಳ ಪರೀಕ್ಷೆ ನಡೆಸಲಾಗಿದ್ದು, ಸೋಂಕು ದೃಢ ಪ್ರಮಾಣ ಶೇ. 9.44 ವರದಿಯಾಗಿದೆ. ಸಕ್ರಿಯ ಪ್ರಕರಣಗಳಲ್ಲಿ 96 ಮಂದಿ ಮನೆ ಆರೈಕೆಯಲ್ಲಿದ್ದಾರೆ. ಉಳಿದಂತೆ ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಈ ವರ್ಷ 171 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಈ ಪ್ರಕರಣಗಳಲ್ಲಿ 70 ಮಂದಿ ಈಗಾಗಲೇ ಚೇತರಿಸಿಕೊಂಡಿದ್ದಾರೆ. ಸೋಂಕಿತರಲ್ಲಿ ಒಬ್ಬರು ಮೃತಪಟ್ಟಿದ್ದಾರೆ.