ನ್ಯೂಸ್

ಸೋಂಕಿತರ ಅಂತ್ರ್ಯಕ್ರಿಯೆಗೆ ಮಾರ್ಗಸೂಚಿ

ಪಂಕಜ ಕೆ.ಎಂ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಯನ್ನು ಸಾಮಾನ್ಯ ಚಿತಾಗಾರ, ಸ್ಮಶಾನ ಹಾಗೂ ರುದ್ರಭೂಮಿಯಲ್ಲಿ ನಡೆಸುವಂತೆ ಸೂಚಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ಸಂಪುಟ ಉಪಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕೋವಿಡ್ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಯನ್ನು ಬಿಬಿಎಂಪಿ ಹಾಗೂ ಆಯಾ ಜಿಲ್ಲೆಗಳ ವ್ಯಾಪ್ತಿಯ ಚಿತಾಗಾರ, ಸ್ಮಶಾನ ಅಥವಾ ರುದ್ರಭೂಮಿಗಳಲ್ಲಿ ನಡೆಸಬೇಕು.

ಮೃತದೇಹಗಳನ್ನು ತರುವುದನ್ನು ನಿರಾಕರಿಸದೆ ಅಲ್ಲಿನ ಸಿಬ್ಬಂದಿ ಎನ್-95 ಮಾಸ್ಕ್ , ಗ್ಲೌವ್ಸ್ ಹಾಗೂ ಪಿಪಿಇ ಕಿಟ್ ಧರಿಸಬೇಕು. ಅಂತ್ರ್ಯಕ್ರಿಯೆ ನಡೆಸಿದ ನಂತರ ಅವುಗಳನ್ನು ಮಾರ್ಗಸೂಚಿಯಂತೆ ವಿಲೇವಾರಿ ಮಾಡಬೇಕು. ಈ ನಿಟ್ಟಿನಲ್ಲಿ ಬಿಬಿಎಂಪಿ ಹಾಗೂ ಜಿಲ್ಲಾಡಳಿತದ ಸಂಬಂಧಿತ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಇಲಾಖೆ ಆಯುಕ್ತ ಡಿ. ರಂದೀಪ್ ತಿಳಿಸಿದ್ದಾರೆ.