ನ್ಯೂಸ್

ಕೋವಿಡ್ ಆಸ್ಪತ್ರೆಗೆ ಹೋದ ದಿನವೇ ಧ್ರುವ ಸರ್ಜಾ, ಪತ್ನಿ ಪ್ರೇರಣಾ ಡಿಸ್ಚಾರ್ಜ್​

ಬೆಂಗಳೂರು: ಸ್ಯಾಂಡಲ್​ವುಡ್​ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾದ ಒಂದೇ ದಿನದಲ್ಲಿ ಡಿಸ್ಚಾರ್ಜ್​ ಆಗಿದ್ದಾರೆ.

ಧ್ರುವ ಸರ್ಜಾ ದಂಪತಿಗೆ ಸೋಂಕು ಇರುವುದು ನಿನ್ನೆ(ಬುಧವಾರ) ಗೊತ್ತಾಗಿತ್ತು. ಚಿಕಿತ್ಸೆಗಾಗಿ ದಾಖಲಾಗಿದ್ದ ದಂಪತಿ ಅಂದು ಸಂಜೆಯೇ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಸ್ವಲ್ಪ ಜ್ವರ ಬಿಟ್ಟರೆ ಬೇರೇನೂ ಲಕ್ಷಣಗಳು ಇರಲಿಲ್ಲ ಎಂಬ ಕಾರಣಕ್ಕೆ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ.

ಸೋಂಕು ತಗುಲಿರುವ ಬಗ್ಗೆ ಟ್ವಿಟರ್​ನಲ್ಲಿ ನಿನ್ನೆ ಮಾಹಿತಿ ಹಂಚಿಕೊಂಡಿದ್ದ ಧ್ರುವ ಸರ್ಜಾ, ‘ನನ್ನ ಹೆಂಡತಿ ಮತ್ತು ನಾನು ಕೋವಿಡ್​19 ಪರೀಕ್ಷೆ ಮಾಡಿಸಿಕೊಂಡಿದ್ದೇವೆ. ವರದಿ ಪಾಸಿಟಿವ್​ ಬಂದಿದೆ. ಶೀಘ್ರವೇ ಗುಣಮುಖರಾಗುವ ವಿಶ್ವಾಸವಿದೆ’ ಎಂದು ಹೇಳಿಕೊಂಡಿದ್ದರು.

‘ನಮ್ಮ ಸಂಪರ್ಕಕ್ಕೆ ಬಂದವರೆಲ್ಲರೂ ದಯವಿಟ್ಟು ಕೋವಿಡ್​ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದು ಕೋರಿದ್ದಾರೆ.