ನ್ಯೂಸ್

ರಸ್ತೆಯಲ್ಲಿ ಹೋಗುತ್ತಿದ್ದ ವೃದ್ಧನನ್ನು ಹಿಗ್ಗಾ-ಮುಗ್ಗ ತುಳಿದ ಹಸುಗಳು; ಮನಕಲಕುವಂತಿದೆ ಸಿಸಿಟಿವಿ ದೃಶ್ಯ| Viral video

Vijayavani Webdesk

Viral video | ವೃದ್ಧ ವ್ಯಕ್ತಿಯೊಬ್ಬರ ಮೇಲೆ ಎರಡು ಬೀದಿ ಹಸುಗಳು ದಾಳಿ ಮಾಡಿರುವ ಘಟನೆ ಬಿಹಾರದ ಬಂಕಾ ಜಿಲ್ಲೆಯಲ್ಲಿ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಬಾರೀ ವೈರಲ್​ ಆಗಿದೆ.

ಈ ವಿಡಿಯೋದಲ್ಲಿ ಒಬ್ಬ ವೃದ್ಧ ವ್ಯಕ್ತಿ ಮೋಟಾರ್​ ಬೈಕ್​ನಿಂದ ಕೆಳಗೆ ಇಳಿಯುತ್ತಿದ್ದಾಗ ಆತನನ್ನು ನೆಲಕ್ಕೆ ಬೀಳಿಸಿ ಹಸುಗಳು ದಾಳಿ ಮಾಡಿರುವುದನ್ನು ಕಾಣಬಹುದು. ಇದಾದ ನಂತರ ಮತ್ತೊಂದು ಹಸು ಕೂಡ ಆತನ ಮೇಲೆ ದಾಳಿ ಮಾಡಲು ಪ್ರಾರಂಭಿಸುತ್ತದೆ. ಆ ಎರಡೂ ಪ್ರಾಣಿಗಳು ಆ ವ್ಯಕ್ತಿಯನ್ನು ಪದೇ ಪದೇ ತುಳಿಯುತ್ತಿದ್ದನ್ನು ಗಮನಿಸಿದ ಸ್ಥಳೀಯರು ಆ ವ್ಯಕ್ತಿಯನ್ನು ಕಾಪಾಡಲು ಮುಂದಾಗಿದ್ದಾರೆ. ಇನ್ನೂ ಸ್ಥಳೀಯರು ಈ ವೃದ್ಧ ಗಾಯಾಳುವನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ಸದ್ಯ ಆ ವ್ಯಕ್ತಿ ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸ್ಥಳೀಯರ ಆಕ್ರೋಶ

ಇನ್ನೂ ಈ ಘಟನೆಯನ್ನು ಖಂಡಿಸಿ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬಿಡಾದಿ ದನಗಳ ಸಂಖ್ಯೆ ಹೆಚ್ಚಳವಾಗಿದ್ದು, ಸಾರ್ವಜನಿಕರು ರಸ್ತೆಯಲ್ಲಿ ಓಡಾಡಲು ಹೆದರುವಂತ ಪರಿಸ್ಥಿತಿ ನಿಮಾರ್ಣವಾಗಿದೆ. ಇದರಿಂದಾಗಿ ಕೆಲವೊಂದು ಪ್ರದೇಶಗಳಲ್ಲಿ ಮನೆಯಿಂದ ಹೊರಬರಲು ಕೂಡ ಭಯಪಡುವಂತಾಗಿದೆ. ಈ ಹಸುಗಳ ಬಗ್ಗೆ ಅಧಿಕಾರಿಗಳು ತುರ್ತುಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

(ಏಜೆನ್ಸೀಸ್)