ನ್ಯೂಸ್

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ; ಶೀಘ್ರ ಗುಣಮುಖರಾಗಲಿ ಎಂದ CT Ravi

ಬೆಂಗಳೂರು: ಬೆಳಗಾವಿಗೆ ಪ್ರಯಾಣಿಸುವ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ (Laxmi Hebbalkar) ಅವರಿದ್ದ ಕಾರು ಅಪಘಾತಕ್ಕೀಡಾಗಿದ್ದು, ಸಚಿವರ ಬೆನ್ನು ಮೂಲೆ ಮುರಿದಿದೆ. ವೈದ್ಯರು ಅವರಿಗೆ ಒಂದು ತಿಂಗಳ ಬೆಡ್​ ರೆಸ್ಟ್​ಗೆ ಸೂಚನೆ ನೀಡಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ.

ಇನ್ನೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ (Laxmi Hebbalkar) ಅವರ ಕಾರು ಅಪಘಾತಕ್ಕೆ ಸಂಬಂಧಿಸಿದಂರೆ ರಾಜಕೀಯ ಸೇರಿದಂತೆ ಅನೇಕ ಕ್ಷೇತ್ರದ ಗಣ್ಯರು ಆರೋಗ್ಯ ವಿಚಾರಿಸಿ ಟ್ವೀಟ್​ ಮಾಡುತ್ತಿದ್ದು, ಬಿಜೆಪಿ ಸದಸ್ಯ ಸಿಟಿ ರವಿ (CT Ravi) ಟ್ವೀಟ್​ ಮಾಡಿದ್ದು, ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಶೀಘ್ರ ಗುಣಮುಖರಾಗಲಿ ಎಂದು ಶ್ರೀ ದೇವರಲ್ಲಿ ಪ್ರಾರ್ಥಿಸುವೆ ಎಂದು ಹಾರೈಸಿದ್ದಾರೆ.

ಇಂದು ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಶೀಘ್ರ ಗುಣಮುಖರಾಗಲಿ ಎಂದು ಶ್ರೀ ದೇವರಲ್ಲಿ ಪ್ರಾರ್ಥಿಸುವೆ ಎಂದು ಬರೆದುಕೊಂಡಿದ್ದಾರೆ. ಸದ್ಯ ಸಿಟಿ ರವಿ ಅವರ ಟ್ವೀಟ್​ ಸಖತ್​ ವೈರಲ್​ ಆಗುತ್ತಿದೆ.

ಕಳೆದ ವರ್ಷ ಡಿಸೆಂಬರ್​ನಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಅವಾಚ್ಯ ಶಬ್ದ ಬಳಸಿದ್ದಾರೆ ಎಂದು ಆರೋಪಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಬಿಜೆಪಿ ಸದಸ್ಯ ಸಿಟಿ ರವಿ ವಿರುದ್ಧ ದೂರು ನೀಡಿದ್ದರು. ಈ ವಿಚಾರ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ವಿಚಾರಣೆ ಹಂತದಲ್ಲಿದೆ.

https://www.vijayavani.net/pro-ks-bhagawan-controversial-remark-about-hindu-dharma

https://www.vijayavani.net/bitter-jasprit-bumrah-champions-trophy-blow-to-india-report-says-india-pacer-to-miss