ವಾಷಿಂಗ್ಟನ್: ಕಲಾ ದಂಪತಿಯಾದ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಅವರು ಅಮೆರಿಕದ ಬಾಸ್ಟನ್ ನ್ಯೂ ಇಂಗ್ಲೆಂಡ್ ಕನ್ನಡ ಕೂಟದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಈ ಕಾರ್ಯಕ್ರಮಕ್ಕೆ ಸುಮಾರು 600ಕ್ಕೂ ಹೆಚ್ಚು ಕನ್ನಡಿಗರು ಭಾಗವಹಿಸಿದರು. ಇನ್ನು ಎರಡು ತಿಂಗಳ ಕಾಲ ಅಮೆರಿಕದಲ್ಲಿ ನೆಲೆಸಿರುವ ಸ್ಥಳೀಯ ಕನ್ನಡದ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಅಭಿನಯ, ನಟನೆ ಹಾಗೂ ರಂಗಗೀತೆಗಳ ತರಬೇತಿಯನ್ನು ನೀಡಲಾಗುತ್ತದೆ.
ಅಮೆರಿಕದ ಹಲವು ಸ್ಥಳಗಳಲ್ಲಿ ಇಂತಹ ಕಾರ್ಯಕ್ರಮ ಹಮ್ಮಿಕೊಳಲಾಗಿದ್ದು, ದಸರಾ, ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.