ದಂಡದ ರಸೀದಿಯನ್ನು ಪ್ರದರ್ಶಿಸುತ್ತಿರುವ ಟ್ರಾಫಿಕ್ ಪೊಲೀಸರು.  
ನ್ಯೂಸ್

ಪಾದಚಾರಿ ಮಾರ್ಗದ ಮೇಲೆ ವಾಹನ ಚಾಲನೆಗೆ ದಂಡ

ಗೋವಿಂದರಾಜು ಚಿನ್ನಕುರ್ಚಿ

ಬೆಂಗಳೂರು: ಪಾದಚಾರಿ ಮಾರ್ಗದ ಮೇಲೆ ವಾಹನ ಚಲಾಯಿಸುತ್ತಿದ್ದ ಸವಾರರ ವಿರುದ್ಧ ಸಂಚಾರ ಪೊಲೀಸರು ಶುಕ್ರವಾರ ವಿಶೇಷ ಕಾರ್ಯಾಚರಣೆ ನಡೆಸಿ 176 ಕೇಸ್‌ಗಳನ್ನು ದಾಖಲಿಸಿದ್ದಾರೆ.

ಪಾದಚಾರಿ ಮಾರ್ಗದ ಮೇಲೆ ದ್ವಿಚಕ್ರ ವಾಹನಗಳನ್ನು ಚಲಾಯಿಸಿದಾಗ ಜನರು ರಸ್ತೆಗೆ ಇಳಿಯುತ್ತಿದ್ದ ಪರಿಣಾಮ ಅಪಘಾತಗಳು ಸಂಭವಿಸುತ್ತಿದ್ದವು. ಈ ಬಗ್ಗೆ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ದಕ್ಷಿಣ ಮತ್ತು ಪೂರ್ವ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ದಂಡ ವಿಧಿಸಿದ್ದಾರೆ.

ದಕ್ಷಿಣ ಸಂಚಾರ ವಿಭಾಗ ಪೊಲೀಸರು 176 ಪ್ರಕರಣ ಹಾಗೂ ಪೂರ್ವ ಸಂಚಾರ ವಿಭಾಗ ಪೊಲೀಸರು, 100 ಪಾದಚಾರಿ ಮಾರ್ಗದ ಮೇಲೆ ಸಂಚಾರ, 182 ಏಕಮುಖ ಸಂಚಾರ ಮತ್ತು ುಟ್‌ಪಾತ್ ಮೇಲೆ ಪಾರ್ಕಿಂಗ್ 50 ಪ್ರಕರಣಗಳನ್ನು ದಾಖಲಿಸಿ ದಂಡ ವಸೂಲಿ ಮಾಡಿದ್ದಾರೆ. ಇಂತಹ ಕಾರ್ಯಾಚರಣೆ ಮುಂದುವರಿಯಲಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.