ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅವರ ಹುಟ್ಟು ಹಬ್ಬವನ್ನು ಜೆಡಿಎಸ್ ಕಾರ್ಯಕರ್ತರು ಮತ್ತು ಅವರ ಅಭಿಮಾನಿಗಳು ಭಾರತೀನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ ಸರಳವಾಗಿ ಆಚರಿಸಿದರು. 
ನ್ಯೂಸ್

ಡಿ.ಸಿ. ತಮ್ಮಣ್ಣ ಜನ್ಮದಿನ ಆಚರಣೆ

ಎಂ.ರವಿ

ಕೆ.ಎಂ.ದೊಡ್ಡಿ: ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಅವರ ಹುಟ್ಟುಹಬ್ಬವನ್ನು ಜೆಡಿಎಸ್ ಕಾರ್ಯಕರ್ತರು ಮತ್ತು ಅವರ ಅಭಿಮಾನಿಗಳು ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ ಸರಳವಾಗಿ ಆಚರಿಸಿದರು.

ಆಸರೆ ಸೇವಾ ಟ್ರಸ್ಟ್ ಅಧ್ಯಕ್ಷ, ಜೆಡಿಎಸ್ ಯುವ ಮುಖಂಡ ರಘು ವೆಂಕಟೇಗೌಡ ಮಾತನಾಡಿ, ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಕಿರುಗಾವಲು ಮತ್ತು ಮದ್ದೂರು ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಕೊಡುಗೆಗಳನ್ನು ನೀಡುವ ಮೂಲಕ ಜನಪರ ನಾಯಕ ಎನಿಸಿಕೊಂಡಿದ್ದಾರೆ ಎಂದರು.

ತಮ್ಮ ಇಳಿ ವಯಸ್ಸಿನಲ್ಲೂ ಮದ್ದೂರು ಕ್ಷೇತ್ರಾದ್ಯಂತ ಸುತ್ತಾಡಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಪ್ರಬಲಗೊಳಿಸುತ್ತಿದ್ದು, ಅವರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ. ಅವರಿಗೆ ತಾಯಿ ಚಾಮುಂಡೇಶ್ವರಿ ಆಯಸ್ಸು, ಆರೋಗ್ಯ ನೀಡಿ ಕಾಪಾಡಲಿ ಎಂದು ಆಶಿಸಿದರು.

ಸಮತ ಸೈನಿಕ ದಳದ ಜಿಲ್ಲಾಧ್ಯಕ್ಷ ಕರಡಕೆರೆ ಯೋಗೇಶ್, ಮುಖಂಡರಾದ ಕಾರ್ಕಹಳ್ಳಿ ಮಹೇಶ್, ವಿಕಾಸ್ ಬೋರೇಗೌಡ, ಸಂತೋಷ್ ಸೇರಿದಂತೆ ಮತ್ತಿತರರಿದ್ದರು.