ನ್ಯೂಸ್

ಕೇಂದ್ರ ಬಜೆಟ್ 2024​: ವಿತ್ತಸಚಿವೆಗೆ ಸಿಹಿತಿನಿಸಿ ಗುಡ್​ಲಕ್​ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಮುಂದಿನ ಐದು ವರ್ಷಗಳು ಮಾರ್ಗಸೂಚಿ ಎಂದೇ ಬಿಂಬಿತವಾಗಿರುವ ಕೇಂದ್ರ ಬಜೆಟ್​​ ಮಂಡನೆಗೂ ಮುನ್ನ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಬಜೆಟ್​ ಮಂಡನೆಗೆ ಔಪಚಾರಿಕ ಒಪ್ಪಿಗೆ ಪಡೆದರು.

ಭೇಟಿಯ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಿರ್ಮಲಾ ಸೀತಾರಾಮನ್​ ಅವರಿಗೆ ಸಿಹಿ ಮೊಸರು ಶುಭ ಕೋರಿದರು. ಈ ವೇಳೆ ವೇಳೆ ಹಣಕಾಸು ಸಚಿವಾಲಯದ ಹಲವಾರು ಹಿರಿಯ ಅಧಿಕಾರಿಗಳು ರಾಷ್ಟ್ರಪತಿ ಭವನದಲ್ಲಿ ಉಪಸ್ಥಿತರಿದ್ದರು.

ರಾಷ್ಟ್ರಪತಿಗಳ ಒಪ್ಪಿಗೆ ಬಳಿಕ ಸಂಸತ್ತಿನ ಕಡೆ ತೆರಳಲಿರುವ ನಿರ್ಮಲಾ ಸೀತಾರಾಮನ್​ ಬಜೆಟ್​ ಮಂಡನೆಗೂ ಮುನ್ನ ಸಂಪುಟ ಸಭೆಯಲ್ಲಿ ಬಜೆಟ್​ಗೆ ಅನುಮೋದನೆ ಪಡೆಯಲಿದ್ದಾರೆ. ಇದಾದ ನಂತರ ಬೆಳಗ್ಗೆ 11 ಗಂಟೆಗೆ ಬಜೆಟ್​ ಮಂಡನೆ ಆರಂಭಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11ನೇ ಪೂರ್ಣ ಪ್ರಮಾಣದ ಬಜೆಟ್​ ಇದಾಗಿದ್ದು, ವಿತ್ತ ಸಚಿವೆಯಾಗಿ ನಿರ್ಮಲಾ ಸೀತಾರಾಮನ್​ ಅವರು ಮಂಡಿಸುತ್ತಿರುವ 6ನೇ ಬಜೆಟ್​ ಆಗಿದೆ. ಈ ಬಾರಿಯು ಸೂಟ್​ಕೇಸ್ ಸಂಪ್ರದಾಯವಿಲ್ಲ ಮತ್ತು ಮುದ್ರಣದ ಪ್ರತಿಗಳು ಇರುವುದಿಲ್ಲ. ಕಳೆದ ಬಾರಿಯಂತೆ ಇ ಬಜೆಟ್ ಮಂಡನೆಯಾಗಲಿದೆ. ​​ ಕಳೆದ ಬಾರಿಯಂತೆ “ಬಹಿ ಖಾತಾ” ಸಂಪ್ರದಾಯವನ್ನು ಬದಿಗಿಟ್ಟು ಟ್ಯಾಬ್​ ಮೂಲಕ ಆಯವ್ಯಯ ಮಂಡನೆ ಮಾಡಲಿದ್ದಾರೆ.