Sugar Factory movie: ಬಿಡುಗಡೆಗೂ ಮುನ್ನವೇ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ‘ಶುಗರ್ ಫ್ಯಾಕ್ಟರಿ’ ಚಿತ್ರ ಭಾರಿ ಸುದ್ದಿಯಲ್ಲಿತ್ತು. ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಟ್ರೇಲರ್ ಕುತೂಹ ಮೂಡಿಸಿದ್ದು, ಇದೀಗ ಸಿನಿಮಾದ ಜಹಂಪನಾ ಹಾಡು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. . ಟ್ರೇಲರ್’ನಲ್ಲಿ ಮನೋರಂಜನೆಯ ಮಹಾಪೂರವೇ ಹರಿದು ಬಂದಿದ್ದು, ಇದೀಗ ಪ್ರೇಕ್ಷಕರು ʼಜಹಾಪನಾʼ ಸಾಂಗ್‌ಗೆ ಸೂಪರ್ ಅಂತಿದ್ದಾರೆ.
ದೀಪಕ್ ಅರಸ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ "ಶುಗರ್ ಫ್ಯಾಕ್ಟರಿ" ಚಿತ್ರಕ್ಕಾಗಿ ಖ್ಯಾತ ಗೀತರಚನೆಕಾರ ಜಯಂತ ಕಾಯ್ಕಿಣಿ ಅವರು "ಜಹಾಪನಾ" ಎಂಬ ಸುಮಧುರ ಪ್ರೇಮಗೀತೆ ಬರೆದಿದ್ದಾರೆ. ಇತ್ತೀಚೆಗೆ ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.
ಧನಂಜಯ್ ಅವರ ನೃತ್ಯ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ಹಾಗೂ ಸೋನಾಲ್ ಮೊಂತೆರೊ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ.ನಿಹಾಲ್ ತಾವ್ರೊ ಹಾಗೂ ಅಮೃತಾ ನಾಯಕ್ ಅವರ ಕಂಠಸಿರಿಯಲ್ಲಿ ಈ ಹಾಡು ಮಧುರವಾಗಿ ಮೂಡಿಬಂದಿದೆ.
ನವೆಂಬರ್ 24 ರಂದು ಬಹು ನಿರೀಕ್ಷಿತ ಚಿತ್ರ ಶುಗರ್ ಫ್ಯಾಕ್ಟರಿ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ.\
ಆರ್. ಗಿರೀಶ್ ನಿರ್ಮಿಸಿರುವ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಾಲ್ ಮಾಂತೆರೊ, ಅದ್ವಿತಿ ಶೆಟ್ಟಿ, ರುಹಾನಿ ಶೆಟ್ಟಿ ಕೃಷ್ಣ ಅವರಿಗೆ ನಾಯಕಿಯರಾಗಿ ನಟಿಸಿದ್ದಾರೆ.
ಡಾರ್ಲಿಂಗ್ ಕೃಷ್ಣ ಅವರ ಸಿನಿಜರ್ನಿಯಲ್ಲೇ "ಶುಗರ್ ಫ್ಯಾಕ್ಟರಿ" ಬಿಗ್ ಬಜೆಟ್ ಚಿತ್ರವೆಂದು ಹೇಳಲಾಗುತ್ತಿದೆ. ಅಭಿಮಾನಿಗಳು ಸಹ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡು, ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ.