ಬೆಂಗಳೂರು: ರೇಣುಕಾ ಸ್ವಾಮಿ ಎನ್ನುವ ವ್ಯಕ್ತಿಯೊರ್ವನ ಹತ್ಯೆ ಮಾಡಿದ ಆರೋಪ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಮೇಲಿದೆ. ಸದ್ಯ ಅವರನ್ನು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ದರ್ಶನ್ ಹಾಗೂ ಅವರ ಸಹಚರರು ಇದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪತಿ ಅರೆಸ್ಟ್ ಆಗಿದ್ದರೂ ಅವರ ಪತ್ನಿ ವಿಜಯಲಕ್ಷ್ಮಿ ಇದುವರೆಗೆ ಒಂದೇ ಒಂದು ಪ್ರತಿಕ್ರಿಯೆ ನೀಡಿಲ್ಲ. ಹೀಗಿರುವಾಗಲೇ ವಿಜಯಲಕ್ಷ್ಮಿ ಅವರು ಇನ್ಸ್ಟಾಗ್ರಾಮ್ ಪ್ರೊಫೈಲ್ ಫೋಟೋ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲ ನಟ ದರ್ಶನ್ ಅವರನ್ನು ಅನ್ಫಾಲೋ ಮಾಡಿದ್ದಾರೆ.
ಪವಿತ್ರಾ ಗೌಡ ವಿಚಾರದಲ್ಲಿ ಆಗಾಗ ಸೋಶಿಯಲ್ ಮೀಡಿಯಾಗಳ ಮೂಲಕ ಯುದ್ಧ ಸಾರುತ್ತಿದ್ದ ವಿಜಯಲಕ್ಷ್ಮಿ ಅವರು ಈ ಬಾರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ದರ್ಶನ್ ಕೊಲೆ ಆರೋಪದಲ್ಲಿ ಸಿಕ್ಕಿ ಹಾಕಿಕೊಂಡಿರುವುದ ಪವಿತ್ರಾ ಅವರ ವಿಚಾರದಲ್ಲಿ. ಹೀಗಾಗಿ ಅವರಿಗೆ ಸಹಜವಾಗಿಯೇ ಅಸಮಾಧಾನ ಉಂಟಾಗಿರುತ್ತದೆ.
ಇನ್ಸ್ಟಾಗ್ರಾಮ್ನಲ್ಲಿ ದರ್ಶನ್ ಸೇರಿ ಎಲ್ಲರನ್ನೂ ವಿಜಯಲಕ್ಷ್ಮಿ ಅನ್ಫಾಲೋ ಮಾಡಿದ್ದಾರೆ. ಈ ಮೊದಲು ಅವರು ದರ್ಶನ್ನ ಫಾಲೋ ಮಾಡುತ್ತಿದ್ದರು. ಇನ್ನು, ಇನ್ಸ್ಟಾಗ್ರಾಮ್ ಡಿಪಿಯನ್ನು ಕೂಡ ತೆಗೆದು ಹಾಕಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.