ನ್ಯೂಸ್

ದರ್ಶನ್ ಕೇಸ್ ಸರ್ಕಾರಕ್ಕೆ ನೋಟಿಸ್

Bengaluru - General - Pavithra Kundapur

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಎರಡನೇ ಆರೋಪಿ ನಟ ದರ್ಶನ್, ಮನೆ ಊಟ ಪಡೆಯಲು ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಯ ಸಂಬಂಧ ಜೈಲು ಅಧಿಕಾರಿಗಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ಏಕಸದಸ್ಯ ಪೀಠ ಮನವಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಸರ್ಕಾರ, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಮತ್ತು ಜೈಲು ಮೇಲ್ವಿಚಾರಣಾ ಅಧಿಕಾರಿಗಳಿಗೆ ಸೂಚಿಸಿದೆ.

ದರ್ಶನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ.ಎನ್ ಫಣೀಂದ್ರ ಅವರು, 1963ರ ಕರ್ನಾಟಕ ಬಂಧೀಖಾನೆ ಕಾಯ್ದೆಯ ಸೆಕ್ಷನ್ 30ರ ಪ್ರಕಾರ ವಿಚಾರಣಾಧೀನ ಕೈದಿಗಳು ಮನೆಯಿಂದ ಆಹಾರ, ಹಾಸಿಗೆ, ಬಟ್ಟೆ, ಪುಸ್ತಕ ಇತ್ಯಾದಿ ವಸ್ತುಗಳನ್ನು ತರಿಸಿಕೊಳ್ಳಲು ಅವಕಾಶವಿದ್ದು, ಅನುಮತಿ ಒದಗಿಸುವಂತೆ ಮನವಿ ಮಾಡಿದರು.

ಆಗ ಪೀಠವು ಬಂಧೀಖಾನೆ ಕಾಯ್ದೆಗೆ ತಿದ್ದುಪಡಿಯಾಗಿದ್ದು, ಪರಿಷ್ಕರಣ ನಿಯಮ ಏನಿದೆ ಎಂಬುದನ್ನು ಹಾಗೂ ಸಂಬಂಧಿತ ಎ್ಲ ನಿಬಂಧನೆಗಳನ್ನು ಒಟ್ಟುಗೂಡಿಸಿ ನ್ಯಾಯಪೀಠಕ್ಕೆ ಸಲ್ಲಿಸಬೇಕು ಎಂದು ಸೂಚಿಸಿ ಜು. 18ಕ್ಕೆ ವಿಚಾರಣೆ ಮುಂದೂಡಿತು.