ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಉಪಚುನಾವಣೆಯ ಪ್ರಚಾರ ಕಣ ಕಲರ್ಫುಲ್ ಆಗುತ್ತಿದೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕ್ಯಾಂಪೇನ್ಗೆ ಇಳಿದಿದ್ದಾರೆ. ಪ್ರಚಾರಕ್ಕೆ ತೆರಳುವುದಕ್ಕೂ ಮುನ್ನ ಮಾತನಾಡಿದ ಅವರು, ಪಕ್ಷ ಮತ್ತು ನಿರ್ಮಾಪಕರು ಎಂದ ಮಾತ್ರಕ್ಕೆ ನಾನು ಪ್ರಚಾರಕ್ಕೆ ಇಳಿಯುವುದಿಲ್ಲ. ವ್ಯಕ್ತಿಯನ್ನು ನೋಡಿ ಪ್ರಚಾರದಲ್ಲಿ ಭಾಗವಹಿಸುತ್ತಿದ್ದೇನೆ ಎಂದು ದರ್ಶನ್ ಹೇಳಿದ್ದಾರೆ.
ಇದನ್ನೂ ಓದಿ: ಅದಿತಿ ಪ್ರಭುದೇವ ಅಕೌಂಟಲ್ಲಿ ಇನ್ನೆರಡು ಸಿನಿಮಾ
ನಿರ್ಮಾಪಕರಾದ ಮುನಿರತ್ನ ಅವರು ಕರೊನಾ ಲಾಕ್ ಡೌನ್ ಸಮಯದಲ್ಲಿ ಆರ್ಆರ್ ನಗರ ಕ್ಷೇತ್ರದ ಜನತೆಗೆ ಸಾಕಷ್ಟು ಸಹಾಯ ಮಾಡಿದ್ದಾರೆ. ದಿನಸಿ ವಿತರಿಸಿದ್ದಾರೆ. ಆ ಒಂದು ಕಾರಣಕ್ಕೆ ಮಾನವೀಯತೆಯ ದೃಷ್ಟಿಯಿಂದ ಅವರ ಪರ ಪ್ರಚಾರದಲ್ಲಿ ಪಾಲ್ಗೊಂಡಿದ್ದೇನೆ ಎಂದರು.
ಸಂಕಷ್ಟಕ್ಕೆ ನಿಂತವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ. ಅವರು ನನ್ನ ಆಪ್ತರು ಅವರು ಕರೆದಲ್ಲಿಗೆ ತೆರಳುತ್ತೇನೆ ಎಂದಿದ್ದಾರೆ. ಅಂದಹಾಗೆ, ಇಂದು ಇಡೀ ದಿನ ದರ್ಶನ್ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದು, ಕ್ಯಾಂಪೇನ್ಗೆ ಸ್ಟಾರ್ ಕಳೆ ಸಿಕ್ಕಂತಾಗಿದೆ.