ನ್ಯೂಸ್

ರಮ್ಯಾ ಬೆಂಬಲಕ್ಕೆ ನಿಂತ ಶಿವಣ್ಣಗೆ ಟಾಂಗ್​​ ಕೊಟ್ಟ ದೊಡ್ಮನೆ ಸೊಸೆ ಯುವ ಪತ್ನಿ! | Actress Ramya

Actress Ramya: ತನ್ನ ವಿರುದ್ಧ ತೀರಾ ಕೊಳಕು ಕಾಮೆಂಟ್​ಗಳನ್ನು ಮಾಡಿದ ನಟ ದರ್ಶನ್​​ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಕೊನೆಗೂ ದೂರು ದಾಖಲಿಸಿದ್ದಾರೆ. ಕಳೆದ ಎರಡ್ಮೂರು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದ್ದ ಪೋಸ್ಟ್​ ವಾರ್​ಗೆ​ ಇದೀಗ ಕಾನೂನು ಸಮರ ಶುರುವಾಗಿದೆ.

ನಟ ದರ್ಶನ್​​ ಫ್ಯಾನ್ಸ್​​ ವಿರುದ್ಧ ಏಕಾಂಗಿ ಆಗಿ ಗುಡುಗಿದ್ದ ನಟಿ ರಮ್ಯಾಗೆ ಈ ವಿಚಾರದಲ್ಲಿ ಮಹಿಳಾ ಆಯೋಗ ಸೇರಿದಂತೆ ಒಬ್ಬೊಬ್ಬರಾಗಿ ಬೆಂಬಲ ನೀಡುತ್ತಿದ್ದಾರೆ. ಇದೀಗ ಸ್ಯಾಂಡಲ್​​​ವುಡ್​ ನಟ ಚಕ್ರವರ್ತಿ ಶಿವರಾಜಕುಮಾರ್ ಕೂಡ ಬೆಂಬಲ ನೀಡಿ ತಮ್ಮ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಆದರೆ, ರಾಘವೇಂದ್ರ ರಾಜ್‌ಕುಮಾರ್ ಅವರ ಮಗ ಯುವ ರಾಜ್‌ಕುಮಾರ್ ಅವರ ಪತ್ನಿ ಶ್ರೀದೇವಿ ಬೈರಪ್ಪ ಅವರು ಸಾಮಾಜಿಕ ಜಾಲತಾಣದಲ್ಲಿ ದೊಡ್ಮನೆ ಕುಟುಂಬದ ನಡೆಯ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.

ಶ್ರೀದೇವಿ ಭೈರಪ್ಪ ತಮ್ಮ ಇನ್ಸ್​ಸ್ಟಾಗ್ರಾಮ್​ನಲ್ಲಿ ಸ್ಟೋರಿ ಹಂಚಿಕೊಂಡಿದ್ದು, ''ಮಹಿಳೆಯರನ್ನು ಅವಮಾನಿಸುವುದರ ವಿರುದ್ಧ ಮಾತನಾಡುವುದು ನೋಡುವಾಗ, ತಮ್ಮ ಕುಟುಂಬದಲ್ಲೇ ಇದೆಲ್ಲ ನಡೆಯುವಾಗ ಮಾನತಾಡದೇ ಸುಮ್ಮನೆ ಇದ್ರಲ್ಲ, ಅವಾಗ ನಿದ್ದೆ ಮಾಡ್ತಾ ಇದ್ರ ಎಲ್ಲಾ??!'' ಎಂದಿದ್ದಾರೆ. ಜತೆಗೆ ಈ ಪೋಸ್ಟ್‌ನ ಕೊನೆಯಲ್ಲಿ #Hypocrites #Drama ಎಂಬ ಹ್ಯಾಶ್‌ಟ್ಯಾಗ್‌ಗಳನ್ನು ಬಳಸುವ ಮೂಲಕ ಶಿವಣ್ಣನ ಕಾಲೆಳೆಯುವ ಯತ್ನ ಮಾಡಿದ್ದಾರೆ.

ಶಿವಣ್ಣ ಹೇಳಿದ್ದೇನು? ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಆ ರೀತಿ ಮಾತನಾಡುವುದು ಸರಿಯಲ್ಲ. ಅದನ್ನು ನಾವು ಸಹಿಸಬಾರದು. ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟಮೊದಲು ಒಬ್ಬ ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ. ಸೋಶಿಯಲ್ ಮೀಡಿಯಾ ತುಂಬಾ ಬಲಿಷ್ಠವಾದ ಅಸ್ತ್ರ, ಅದನ್ನು ತಮ್ಮ ಏಳಿಗೆಗಾಗಿ ಬಳಸಬೇಕೇ ಹೊರತು, ಅವಾಚ್ಯ ಶಬ್ದಗಳಿಂದ ನಿಂದಿಸಿ, ದ್ವೇಷ-ಅಸೂಯೆಯನ್ನು ಬಿತ್ತಲು ಬಳಸಬಾರದು. ನಿಮ್ಮ ನಿಲುವು ಸರಿಯಿದೆ, ರಮ್ಯಾ. ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ ಎಂದಿದ್ದಾರೆ.