ಹೊಸದಿಲ್ಲಿ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳು ದೇವಸ್ಥಾನಕ್ಕೆ ಆಗಮಿಸಿದ್ದ ಅಮ್ಮ-ಮಗಳ ಮೇಲೆ ಗುಂಡು ಹಾರಿಸಿದ ಪರಿಣಾಮ ಇಬ್ಬರ ಸ್ಥಿತಿ ಸದ್ಯ ಚಿಂತಾಜನಕವಾಗಿದೆ. ಘಟನೆ ವಾಯವ್ಯ ದೆಹಲಿಯಲ್ಲಿ ವರದಿಯಾಗಿದೆ.
ದೆಹಲಿಯ ಹೊರವಲಯದಲ್ಲಿರುವ ಖೇಡಾ ಗ್ರಾಮದಲ್ಲಿ ನಡೆದ ಗುಂಡಿನ ದಾಳಿಗೆ ತಾಯಿ ಮತ್ತು ಮಗಳು ತುತ್ತಾಗಿದ್ದು, ಸ್ಥಳೀಯ ಪೂಜಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆಯಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಕೂಡಲೇ ಇಬ್ಬರನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿ, ತುರ್ತು ಚಿಕಿತ್ಸೆಯನ್ನು ಕೊಡಿಸಲಾಗಿದೆ. ವೈದ್ಯರ ಪ್ರಕಾರ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಪೊಲೀಸರ ಪ್ರಾಥಮಿಕ ವರದಿಗಳ ಪ್ರಕಾರ, ದಾಳಿಯ ಹಿಂದಿನ ಉದ್ದೇಶವು ಆಸ್ತಿ ವಿವಾದಕ್ಕೆ ಸಂಬಂಧಿಸಿದೆ. ಸದ್ಯ ಪ್ರಕರಣವನ್ನು ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ,(ಏಜೆನ್ಸೀಸ್).