ನ್ಯೂಸ್

ವಿದ್ಯಾರ್ಥಿನಿಲಯಕ್ಕೆ ಡಿಸಿ ಭೇಟಿ, ಪರಿಶೀಲನೆ

ಪ್ರಸಿನ್ ಕೆ.ಆರ್

ಎಚ್.ಡಿ.ಕೋಟೆ: ವಿದ್ಯಾರ್ಥಿನಿಲಯಗಳಲ್ಲಿ ಮಕ್ಕಳಿಗೆ ಸಮರ್ಪಕವಾಗಿ ಊಟ ನೀಡದೆ ಇದ್ದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಲಕ್ಷ್ಮೀಕಾಂತರೆಡ್ಡಿ ತಿಳಿಸಿದರು.

ಪಟ್ಟಣದ ಕಸ್ತೂರಬಾ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಸರಿಯಾಗಿ ಊಟ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮಂಗಳವಾರ ಡಿಸಿ ಎಂ.ಲಕ್ಷ್ಮೀಕಾಂತ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.

ವಿದ್ಯಾರ್ಥಿ ನಿಲಯದ ನಿರ್ವಹಣೆಗೆ ಕರೆಯಲಾಗಿರುವ ಟೆಂಡರ್ ಮಾರ್ಚ್ ಅಂತ್ಯದವರಿಗೆ ಮುಗಿದಿದೆ. ಹೊಸ ಟೆಂಡರ್ ಆಗದಿರುವುದರಿಂದ ಸಮಸ್ಯೆ ಉಂಟಾಗಿದೆ. ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದರು.

ನಿರ್ವಹಣೆ ಮಾಡದೆ ನಿರ್ಲಕ್ಷೃ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಶಾಸಕ ಅನಿಲ್ ಚಿಕ್ಕಮಾದು, ಡಿಡಿಪಿಐ ಜವರೇಗೌಡ, ತಹಸೀಲ್ದಾರ್ ಶ್ರೀನಿವಾಸ್, ಬಿಇಒ ಕಾಂತರಾಜು ಇದ್ದರು.