ನ್ಯೂಸ್

ಕಾವೇರಿ ನೀರಿನ ಸಮಸ್ಯೆಗೆ ಮೇಕೆದಾಟು ಯೋಜನೆಯೇ ಪರಿಹಾರ: ಡಿಸಿಎಂ ಡಿ.ಕೆ. ಶಿವಕುಮಾರ್​

Webdesk - Manjunatha B

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡು ಹಾಗೂ ಕರ್ನಾಟಕ ನಡುವಿನ ವಿವಾದಕ್ಕೆ ಮೇಕೆದಾಟು ಯೋಜನೆಯೊಂದೇ ಪರಿಹಾರ ಎಂದು ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್​ ಅಭಿಪ್ರಾಯಪಟ್ಟಿದ್ದಾರೆ.

ಶುಕ್ರವಾರ ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್​ ಈ ವಿಚಾರವನ್ನು ಸುಪ್ರೀಂ ಕೋರ್ಟ್​ ಗಮನಕ್ಕೂ ತಂದಿದ್ದೇವೆ. ಮೇಕೆದಾಟು ಜಲಾಶಯ ನಿರ್ಮಾಣವಾಗಿದ್ದರೆ ಈ ಸಮಸ್ಯೆ ಉದ್ಭವವಾಗುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಪಾಲಿಸುವುದು ಅನಿವಾರ್ಯ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬಂದರೆ ತಮಿಳುನಾಡಿಗೆ ನೀರು ಹರಿಸುವ ವಿಚಾರಕ್ಕೆ ಪರಿಹಾರ ಸಿಗುತ್ತದೆ. ಜಲಾಶಯ ನಿರ್ಮಾಣವಾದರೆ ಅದರಲ್ಲಿ ಸಂಗ್ರಹಿಸುವ ನೀರನ್ನು ಕುಡಿಯುವ ಹಾಗೂ ಬೇರೆ ಉದ್ಧೇಶಗಳಿಗೆ ಬಳಸಬಹುದು. ಉಳಿದಂತೆ ಅಗತ್ಯವಿದ್ದ ಸಂದರ್ಭಗಳಲ್ಲಿ ತಮಿಳುನಾಡಿಗೆ ನೀರು ಹರಿಸಬಹುದು ಎಂದಿದ್ದಾರೆ.

ಮೇಕೆದಾಟು ಸಂಗ್ರಹ ಚಿತ್ರ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡು ಹಾಗೂ ಕರ್ನಾಟಕ ನಡುವಿನ ವಿವಾದಕ್ಕೆ ಮೇಕೆದಾಟು ಯೋಜನೆಯೊಂದೇ ಪರಿಹಾರ. ಈ ವಿಚಾರವನ್ನು ಸುಪ್ರೀಂ ಕೋರ್ಟ್​ ಗಮನಕ್ಕೂ ಸಹ ತಂದಿದ್ದೇವೆ. ಮೇಕೆದಾಟು ಜಲಾಶಯ ನಿರ್ಮಾಣವಾಗಿದ್ದರೆ ಈ ಸಮಸ್ಯೆ ಉದ್ಭವವಾಗುತ್ತಿರಲಿಲ್ಲ ಎಂದು ಹೇಳಿದ್ದಾರೆ.

ತಮಿಳುನಾಡು ತನ್ನ ಪಾಲಿನ ನೀರನ್ನು ಯಾವ ಉದ್ದೇಶಕ್ಕೆ ಬೇಕಾದರೂ ಬಳಸಬಹುದು. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ತಮಿಳುನಾಡಿಗೆ ನೀರು ಹರಿಸುವ ವಿಚಾರವಾಗಿ ವಿರೋಧ ವ್ಯಕ್ತವಾಗುತ್ತಿದೆ. ಆದರೆ, ನಾವು ನ್ಯಾಯಾಲಯದ ಆದೇಶ ಪಾಲಿಸುವುದು ಅನಿವಾರ್ಯ ಎಂದು ಡಿಸಿಎಂ, ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್​​ ಕಾವೇರಿ ಜಲವಿವಾದದ ಕುರಿತು ಮಾತನಾಡಿದ್ದಾರೆ.