ಬೆಂಗಳೂರು:
ಸರ್ವಜ್ಞನಗರ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸರ್ವಜ್ಞನಗರ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಕೆ.ಜೆ.ಜಾರ್ಜ್ ಅವರ ಸಮ್ಮುಖದಲ್ಲಿ ಸಭೆ ನಡೆಸಿದ ಡಿಸಿಎಂ, ಆಗಬೇಕಾಗಿರುವ ಕೆಲಸಗಳ ಬಗ್ಗೆ ಗಮನಹರಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಕ್ಷೇತ್ರದಲ್ಲಿ ಬಾಕಿ ಇರುವ ಕಾಮಗಾರಿ ಮತ್ತು ಬೇಕಾಗಿರುವ ಅನುದಾನ ಮತ್ತಿತರ ಮಾಹಿತಿಯನ್ನು ಕೆ.ಜೆ.ಜಾರ್ಜ್ ಅವರು ಡಿಸಿಎಂ ಗಮನಕ್ಕೆ ತಂದರು.
ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.