ಬೆಂಗಳೂರು:
ರಾಜ್ಯದ ಗ್ರಾಮೀಣ ಭಾಗದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಮತ್ತು ಸಿಎಸ್ ಆರ್ ಂಡ್ ಹೆಚ್ಚಳ ಮಾಡುವ ಬಗ್ಗೆ ವಿಧಾನಸೌಧದಲ್ಲಿ ಗುರುವಾರ ಡಿಸಿಎಂ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.
ಮೊದಲ ಹಂತದಲ್ಲಿ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಅದಕ್ಕಾಗಿ ಸಂಪನ್ಮೂಲ ಕ್ರೋಢೀಕರಣ ಬಗ್ಗೆಯೂ ಚರ್ಚೆ ನಡೆಸಲಾಗಿದೆ.
ಖಾಸಗಿ ಕಂಪನಿಗಳ ಸಿಎಸ್‌ಆರ್ ಂಡ್ ಬಳಕೆ ಮಾಡಿಕೊಂಡು ಶಾಲೆಗಳನ್ನು ಅಭಿವೃದ್ಧಿ ಮಾಡಲು ಸಹಮತ ವ್ಯಕ್ತವಾಗಿದೆ. ಈಗಿರುವ ಸಿಎಸ್‌ಆರ್ ಂಡ್‌ನಲ್ಲಿ ಹೆಚ್ಚು ಶಾಲೆಗಳನ್ನು ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಈ ಸಿಎಸ್‌ಆರ್ ಂಡ್ ಪ್ರಮಾಣ ಹೆಚ್ಚಳ ಮಾಡಬೇಕು ಎನ್ನುವ ಸಲಹೆ ಸಭೆಯಲ್ಲಿ ಕೇಳಿಬಂದಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಉಪ ಮುಖ್ಯಮಂತ್ರಿ ಶಿವಕುಮಾರ್ ಸೂಚನೆ ನೀಡಿದ್ದಾರೆ.
ಶಿಕ್ಷಣ ವ್ಯವಸ್ಥೆಗೆ ಇನ್ನು ಹೆಚ್ಚಿನ ಒತ್ತು ನೀಡಬೇಕು. ಗುಣಾತ್ಮಕ ಶಿಕ್ಷಣ ನೀಡುವತ್ತ ಸರ್ಕಾರ ಗಮನಹರಿಸಿದ್ದು, ಇದಕ್ಕಾಗಿ ಎಲ್ಲರ ಸಲಹೆ ಮತ್ತು ಸಹಕಾರ ಮುಖ್ಯವಾಗಿದೆ ಎಂದು ಡಿಕೆಶಿ ಅವರು ಸಭೆಯಲ್ಲಿ ತಿಳಿಸಿದ್ದಾರೆ.
ಸಚಿವರಾದ ಎಂ.ಬಿ. ಪಾಟೀಲ್, ಪ್ರಿಯಾಂಕ ಖರ್ಗೆ, ಡಾ. ಎಂ ಸಿ ಸುಧಾಕರ್, ಮಧು ಬಂಗಾರಪ್ಪ, ಮುಖ್ಯಮಂತ್ರಿಗಳು ಹಾಗೂ ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಅತೀಕ್ ಅಹಮದ್, ರಾಜ್ಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಶಿಕ್ಷಣ ಇಲಾಖೆ ಆಯುಕ್ತೆ ಕಾವೇರಿ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಭಾಗವಹಿಸಿದ್ದರು.