ನ್ಯೂಸ್

ಸಂಪ್​ನಲ್ಲಿತ್ತು ನವಜಾತ ಶಿಶು ಶವ; 2-3 ದಿನಗಳ ಹಿಂದಷ್ಟೇ ಹುಟ್ಟಿದ್ದ ಮಗು..

ಆನೇಕಲ್: ಪಾಳು ಬಿದ್ದ ಮನೆಯೊಂದರ ಸಂಪ್​ನಲ್ಲಿ ನವಜಾತ ಶಿಶು ಶವ ಪತ್ತೆಯಾಗಿದೆ. ಬನ್ನೇರುಘಟ್ಟ ಸಮೀಪದ ಮನೆಯೊಂದರಲ್ಲಿ ಈ ಪ್ರಕರಣ ನಡೆದಿದೆ.

ಬನ್ನೇರುಘಟ್ಟ ಸಮೀಪದ ಎಸ್. ಬಿಂಗಿಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯಲ್ಲಿ ಈ ಘಟನೆ ನಡೆದಿದೆ. ಪಾಯ ಅರ್ಧಕ್ಕೆ ಹಾಕಿದ್ದ ಮನೆಯಲ್ಲಿನ ಸಂಪ್​ಗೆ ಎರಡು ಮೂರು ದಿನಗಳ ಹಿಂದಷ್ಟೇ ಹುಟ್ಟಿದ್ದ ಮಗುವನ್ನು ಎಸೆದುಹೋಗಲಾಗಿದೆ.

ಶಿಶು ಶವ ಬಿದ್ದಿದ್ದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬನ್ನೇರುಘಟ್ಟ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನವಜಾತ ಶಿಶು ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಬನ್ನೇರುಘಟ್ಟ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.