ನ್ಯೂಸ್

ಕೆನಡಾದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಭಾರತೀಯರ ದಾರುಣ ಸಾವು

ಒಟ್ಟಾವಾ: ಕೆನಡಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಭಾರತೀಯರು ಸಾವನ್ನಪ್ಪಿದ್ದಾರೆ. ಗುರುವಾರ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸ್ಥಳೀಯ ಮಾಧ್ಯಮಗಳ ಪ್ರಕಾರ, ಚಂಡೀಗಢದ ರಿತಿಕ್ ಛಾಬ್ರಾ (23). ಅವರ ಸಹೋದರ ರೋಹನ್ (22), ಪುಣೆಯ ಗೌರವ್ (24) ಮೃತರು.

ಛಾಬ್ರಾ ಮತ್ತು ರೋಹನ್ ಉನ್ನತ ಶಿಕ್ಷಣಕ್ಕಾಗಿ ಕೆನಡಾಕ್ಕೆ ಹೋಗಿದ್ದರು. ಗೌರವ್ ಅವರನ್ನು ಸೆನೆಕಾ ಕಾಲೇಜಿನಲ್ಲಿ ಭೇಟಿಯಾದರು. ಮೂವರೂ ಇತ್ತೀಚೆಗೆ ತಮ್ಮ ಪದವಿಯನ್ನು ಪೂರ್ಣಗೊಳಿಸಿದ್ದಾರೆ.

ಹೃತಿಕ್ ಹುಟ್ಟುಹಬ್ಬ ಆಚರಿಸಲು ತೆರಳಿದ್ದ ಅವರು ತಡರಾತ್ರಿ ಕಾರಿನಲ್ಲಿ ವಾಪಸ್ ಬರುತ್ತಿದ್ದರು. ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಪಿಲ್ಲರ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಮೂವರೂ ಪ್ರಾಣ ಕಳೆದುಕೊಂಡಿದ್ದಾರೆ.

ಈ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಆದರೆ, ಮತ್ತೊಂದು ಕಾರಿನ ಪೈಪೋಟಿಯಿಂದ ಈ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.