ನ್ಯೂಸ್

ಹಿಂಸಾಚಾರದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​, ಡಿಸಿಎಂ ಮನೀಷ್​ ಸಿಸೋಡಿಯ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಮತ್ತು ಉಪ ಮುಖ್ಯಮಂತ್ರಿ ಮನೀಷ್​ ಸಿಸೋಡಿಯ ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿ ಮಾಡಿದರು.

ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುತ್ತಿರುವ ಗುಂಪು ಈಶಾನ್ಯ ದೆಹಲಿಯಲ್ಲಿ ಸೋಮವಾರ ಹಿಂಸಾಚಾರಕ್ಕೆ ಇಳಿದಿತ್ತು. ಇದರಿಂದ ಹಲವರ ಪ್ರಾಣಿ ಹಾನಿ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ಹಾನಿಗೆ ಕಾರಣವಾಗಿದ್ದು ಇನ್ನು ಹಲವರು ಗಾಯಗೊಂಡು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಗಾಯಗೊಂಡವರನ್ನು ದೆಹಲಿಯ ಗುರು ತೇಜ್ ಬಹದ್ದೂರ್ (ಜಿಟಿಬಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಭೇಟಿ ನೀಡಿದ ದೆಹಲಿ ಸಿಎಂ ಮತ್ತು ಡಿಸಿಎಂ ಗಾಯಾಳುಗಳ ಕ್ಷೇಮ ವಿಚಾರಿಸಿದರು.

ದೆಹಲಿಯಲ್ಲಿ ನಡೆಯುತ್ತಿರುವ ಈ ಹಿಂಸಾಚಾರ ಇಡೀ ದೇಶವನ್ನೇ ಚಿಂತೆಗೀಡು ಮಾಡಿದೆ. ಇದರಿಂದ ಜೀವ ಮತ್ತು ಆಸ್ತಿ ಪಾಸ್ತಿಗಳ ಹಾನಿಯಾಗಿದೆ. ಇದು ಎಲ್ಲರ ಮೇಲೂ ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದ ಸಿಎಂ ಅರವಿಂದ ಕೇಜ್ರಿವಾಲ್, ಶಾಂತಿ ಕಾಪಾಡುವಂತೆ ದೆಹಲಿಯ ಜನರಲ್ಲಿ ಮನವಿ ಮಾಡಿದರು.

ಸೋಮವಾರ ನಡೆದ ಹಿಂಸಾಚಾರದಿಂದ ಪೊಲೀಸರು, ನಾಗರಿಕರು ಗಾಯಗೊಂಡಿದ್ದಾರೆ. (ಏಜೆನ್ಸೀಸ್​)