ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದಂತೆಯೇ ರಾಜ್ಯದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಉಂಟಾಗಿದೆ. ಆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಹಕಾರ ಕೋರಿದ್ದಾರೆ.
ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಹೆಚ್ಚಾಗಿದೆ. ದಯಮಾಡಿ ನಿಮ್ಮ ರಾಜ್ಯಗಳಲ್ಲಿರುವ ಹೆಚ್ಚುವರಿ ಆಕ್ಸಿಜನ್ ಅನ್ನು ನಮಗೆ ಕಳುಹಿಸಿಕೊಡಿ ಎಂದು ಅವರು ಟ್ವಿಟ್ಟರ್ನಲ್ಲಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಪ್ರತಿದಿನ 20 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಲಾರಂಭಿಸಿವೆ. ಶುಕ್ರವಾರ ಒಂದೇ ದಿನ 348 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. (ಏಜೆನ್ಸೀಸ್)