ನವದೆಹಲಿ: ಮಹಿಳಾ ಪ್ರತಿಭಟನಾಕಾರರಿಂದ ಪ್ಯಾಲೆಸ್ತೀನ್ ಧ್ವಜವನ್ನು ದೆಹಲಿ ಪೊಲೀಸ್ ಸಿಬ್ಬಂದಿಯೊಬ್ಬರು ಕಸಿದ ದೃಶ್ಯವೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಕ್ರಮವನ್ನು ಪ್ರತಿಭಟಿಸಲು ಮತ್ತು ಪ್ಯಾಲೆಸ್ತೀನ್‌ಗೆ ಬೆಂಬಲಿಸಲು ಹಲವಾರು ವಿದ್ಯಾರ್ಥಿಗಳು ಮತ್ತು ನಾಗರಿಕ ಸಮಾಜದ ಸದಸ್ಯರು ದೆಹಲಿಯ ಜಂತರ್ ಮಂತರ್‌ನಲ್ಲಿ ಜಮಾಯಿಸಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವರನ್ನು ಬಂಧಿಸಿದ್ದಾರೆ.
ಪ್ರತಿಭಟನೆಯ ಸ್ಥಳದಲ್ಲಿದ್ದ 50ಕ್ಕೂ ಹೆಚ್ಚು ಜನರನ್ನು ಪೊಲೀಸರು ಸಂಕ್ಷಿಪ್ತವಾಗಿ ಬಂಧಿಸಿದರು. ಬಂಧಿತರನ್ನು ಕರೆದೊಯ್ಯುತ್ತಿದ್ದಾಗ ಮಹಿಳಾ ಪ್ರತಿಭಟನಾಕಾರರೊಬ್ಬರು ಕೈಯಲ್ಲಿಡಿದಿದ್ದ ಪ್ಯಾಲೆಸ್ತೀನ್ ಕಾಗದದ ಧ್ವಜವನ್ನು ಪೊಲೀಸ್ ಸಿಬ್ಬಂದಿಯೊಬ್ಬರು ಆಕೆಯಿಂದ ಕಸಿದುಕೊಂಡರು. ಈ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.
ಇದನ್ನೂ ಓದಿ: ವಾರಕ್ಕೆ 55 ಗಂಟೆ ಅಥವಾ ಅದಕ್ಕೂ ಹೆಚ್ಚು ಕೆಲಸ ಮಾಡುವುದು ಆರೋಗ್ಯಕ್ಕೆ ಅಪಾಯಕಾರಿ: ಅಧ್ಯಯನದ ವಿವರ ಇಲ್ಲಿದೆ..
ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ, ಪ್ರತಿಭಟನಾಕಾರರು ಪ್ರತ್ಯೇಕ ಗುಂಪುಗಳಲ್ಲಿ ಜಂತರ್ ಮಂತರ್‌ಗೆ ಆಗಮಿಸಿದ್ದರು. ಈ ವೇಳೆ ಪೊಲೀಸ್ ಅಧಿಕಾರಿಗಳು ಅವರನ್ನು ಬಂಧಿಸಿದರು. ಪ್ರತಿಭಟನಾಕಾರರಿಗೆ ಅನುಮತಿಯಿಲ್ಲದ ಕಾರಣ, ಬಂಧಿಸಲಾಗಿದೆ. ದೆಹಲಿಯ ವಿವಿಧ ಪೊಲೀಸ್ ಠಾಣೆಗಳಿಗೆ ಬಂಧಿತರನ್ನು ಕರೆದೊಯ್ದಿದ್ದಾರೆ,(ಏಜೆನ್ಸೀಸ್).