ನವದೆಹಲಿ: ಎಐಎಡಿಎಂಕೆ ಪಕ್ಷದ ಚುನಾವಣಾ ಚಿಹ್ನೆಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿ ಸುಕೇಶ್ ಚಂದ್ರಶೇಖರ್ಗೆ ನ್ಯಾಯಾಲಯ ಶುಕ್ರವಾರ ಜಾಮೀನು ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸುಕೇಶ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರಿದ್ದ ವಿಶೇಷ ಪೀಠವು ವಾದ-ಪ್ರತಿವಾದವನ್ನು ಆಲಿಸಿದ ಬಳಿಕ 5 ಲಕ್ಷ ರೂಪಾಯಿ ಮೌಲ್ಯದ ಬಾಂಡ್ಅನ್ನು ಶ್ಯೂರಿಟಿ ಇರಿಸಿಕೊಂಡು ಜಾಮೀನು ಮಂಜೂರು ಮಾಡಿದ್ದಾರೆ.
ಇದನ್ನೂ ಓದಿ: ದಯವಿಟ್ಟು ಇದೊಂದನ್ನು ಮಾಡಿ… ಐಸಿಸಿ ನೂತನ ಅಧ್ಯಕ್ಷ ಜಯ್ ಷಾಗೆ ಬೇಡಿಕೆಯಿಟ್ಟ ಪಾಕ್ ಕ್ರಿಕೆಟ್ ದಿಗ್ಗಜ
ಎಐಎಡಿಎಂಕೆ ಪಕ್ಷದ ಚಿಹ್ನೆಯನ್ನು ವಿ.ಕೆ. ಶಶಿಕಲಾ ಅವರ ಬಣಕ್ಕೆ ಕೊಡಿಸುವ ಸಂಬಂಧ ಚುನಾವಣಾ ಆಯೋಗದ ಅಧಿಕಾರಿಯೊಬ್ಬರಿಗೆ ಲಂಚ ಆಮಿಷ ಒಡ್ಡಲಾಗಿತ್ತು. ಈ ವಿಚಾರವಾಗಿ ಸುಖೇಶ್ ಮಧ್ಯಸ್ಥಿಕೆ ವಹಿಸಿದ್ದ ಎಂದು ವರದಿಯಾಗಿದೆ.
ಬೇಲ್ ಸಿಕ್ಕರೂ ಸದ್ಯಕ್ಕೆ ಸುಕೇಶ್ ಹೊರಬರುವುದಿಲ್ಲ. ಏಕೆಂದರೆ ಬೇರೆ ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದು, ಅವುಗಳ ವಿಚಾರಣೆ ನಡೆದ ಬಳಿಕ ಸುಕೇಶ್ ಹೊರಬರಲಿದ್ದಾರಾ ಎಂಬುದು ತಿಳಿಯಲಿದೆ.