ನವದೆಹಲಿ: ಮಂಜಿನ ಜತೆಗೆ ಹೆಚ್ಚುತ್ತಿರುವ ವಾಯುಮಾಲಿನ್ಯದ ಕಾರಣ ದೆಹಲಿ ಎನ್ಸಿಆರ್ನಲ್ಲಿ ಗ್ರೇಡೆಡ್ ರೆಸ್ಪಾನ್ಸ್ ಆ್ಯನ್ ಪ್ಲ್ಯಾನ್ ಸ್ಟೇಜ್ (ಜಿಆರ್ಎಪಿ)-3 ಜಾರಿಗೆ ತರಲಾಗಿದೆ. ಇದರನ್ವಯ ಬಿಎಸ್-3 ಪೆಟ್ರೋಲ್ ಮತ್ತು ಬಿಎಸ್-4 ಡೀಸೆಲ್ ನಾಲ್ಕು ಚಕ್ರಗಳ ವಾಹನಗಳನ್ನು ನಿಷೇಧಿಸಲಾಗಿದೆ.
ಅಲ್ಲದೆ ಅನಿವಾರ್ಯವಲ್ಲದ ನಿರ್ಮಾಣ ಕೆಲಸ, ಕಲ್ಲು ಒಡೆಯುವಿಕೆ ಮತ್ತು ಗಣಿಗಾರಿಕೆಯ ಮೇಲೆ ಕೂಡ ನಿಷೇಧ ಹೇರಿದೆ. ಇವುಗಳನ್ನು ಒಳಗೊಂಡಂತೆ ಒಟ್ಟು 8 ಅಂಶಗಳ ಯೋಜನೆ ಜಾರಿಗೊಳಿಸಲಾಗುವುದು ಎಂದು ವಾಯು ಗುಣಮಟ್ಟ ನಿರ್ವಹಣಾ ಆಯೋಗ (ಸಿಎಕ್ಯೂಎಂ) ನಿರ್ಬಂಧಗಳನ್ನು ಪ್ರಕಟಿಸಿದೆ.
ಶನಿವಾರ ಸಂಜೆಯಿಂದ ದೆಹಲಿ ಎನ್ಸಿಆರ್ನ ಗಾಳಿಯ ಗುಣಮಟ್ಟ ಹದಗೆಟ್ಟ ಹಿನ್ನೆಲೆ ಸಿಎಕ್ಯೂಎಂ ಉಪಸಮಿತಿ ತುರ್ತು ಸಭೆ ನಡೆಸಿ ಈ ನಿರ್ಧಾರ ಕೈಗೊಂಡಿದೆ. ರಾಷ್ಟ್ರೀಯ ಭದ್ರತೆ ಅಥವಾ ರಣೆ, ರಾಷ್ಟ್ರೀಯ ಪ್ರಾಮುಖ್ಯತೆಯ ಯೋಜನೆಗಳು, ಆರೋಗ್ಯ ರಣೆ, ರೈಲ್ವೆ, ಮೆಟ್ರೋ ರೈಲು, ವಿಮಾನ ನಿಲ್ದಾಣಗಳು, ಅಂತಾರಾಜ್ಯ ಬಸ್ ರ್ಟಮಿನಲ್ಗಳು, ಹೆದ್ದಾರಿಗಳು, ರಸ್ತೆಗಳು, ಮೇಲ್ಸೇತುವೆಗಳು, ವಿದ್ಯುತ್ ಪ್ರಸರಣ, ಪೈಪ್ಲೈನ್ಗಳು, ನೈರ್ಮಲ್ಯ ಮತ್ತು ನೀರು ಪೂರೈಕೆಗೆ ಸಂಬಂಧಿಸಿದ ನಿರ್ಮಾಣ ಕಾರ್ಯಗಳಿಗೆ ವಿನಾಯಿತಿ ನೀಡಲಾಗಿದೆ.