ಇಂಡಿ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪ್ರಶಾಂತ ಕಾಳೆ ಮಾತನಾಡಿದರು. 
ನ್ಯೂಸ್

ಅರ್ಹರಿಗೆ ಗ್ಯಾರಂಟಿ ಯೋಜನೆ ತಲುಪಿಸಿ

ಇಂಡಿ: ಸರ್ಕಾರದ ಮಹತ್ವಾಕಾಂ ಗ್ಯಾರಂಟಿ ಯೋಜನೆಗಳನ್ನು ಅರ್ಹ ಲಾನುಭವಿಗಳಿಗೆ ತಲುಪಿಸಬೇಕೆಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯ ಪ್ರಶಾಂತ ಕಾಳೆ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಸೋಮವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ಅಧ್ಯತೆ ವಹಿಸಿ ಮಾತನಾಡಿದ ಅವರು, ಅರ್ಹರಿಗೆ ಸರ್ಕಾರದ ಯೋಜನೆ ತಲುಪಿಸುವಲ್ಲಿ ಅಧಿಕಾರಿಗಳ ಪಾತ್ರ ಪ್ರಮುಖವಾಗಿದೆ ಎಂದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ನಂದೀಪ ರಾಠೋಡ, ಹೆಸ್ಕಾಂ ಎಇಇ ಎಸ್​.ಆರ್​. ಮೆಂಡೆಗಾರ, ಚಡಚಣ ಹೆಸ್ಕಾಂ ಎಇಇ ವಿಜಯಕುಮಾರ ಹವಾಲ್ದಾರ್​, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಪುಥಳಾಬಾಯಿ ಬಜಂತ್ರಿ, ಸನಾ ಶೇಖ, ಕೆಕೆಆರ್​ಟಿಸಿ ಟಕ ಪ್ರಭಾರ ವ್ಯವಸ್ಥಾಪಕ ವಿಠ್ಠಲ ಬಿ., ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಪದಾಧಿಕಾರಿಗಳಾದ ಸಂಜೀವಕುಮಾರ ನಾಯ್ಕೋಡಿ, ಸತೀಶ ಹತ್ತಿ, ನಿರ್ಮಲಾ ತಳಕೇರಿ, ಶೈಲಜಾ ಜಾಧವ, ಶಶಿಕುಮಾರ್​ ಹಿರೇಮಠ, ಪ್ರಭು ಕುಂಬಾರ, ಸಂಕೇತ ಜೋಶಿ, ರುದ್ರಗೌಡ ಆಲಗೊಂಡ, ಭೀಮರಾಯ ಮೇತ್ರಿ ಪಾಲ್ಗೊಂಡಿದ್ದರು.