ಶಿರಾಳಕೊಪ್ಪ ಸಮೀಪದ ನೆರಲಗಿ ಸಮುದಾಯ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಎಸ್.ಪಿ. ನಾಗರಾಜ್ ಗೌಡ ಮಾತನಾಡಿದರು. ಕೆ.ಎಸ್.ವೀರನಗೌಡ, ಪಿ.ಶಿವರಾಂ, ಟಿ.ಶಿವಶಂಕ್ರಪ್ಪ, ಎಸ್.ಪಿ.ಚಂದ್ರಶೇಖರ ಗೌಡ ಇತರರಿದ್ದರು.  
ನ್ಯೂಸ್

ಸಾಧನೆಗಳನ್ನು ಮನೆಮನೆಗೆ ತಲುಪಿಸಿ

ಶಿರಾಳಕೊಪ್ಪ: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಬೇಕಾದರೆ ಕಾರ್ಯಕರ್ತರು ಸಮರ್ಪಣಾ ಭಾವದಿಂದ ಶ್ರಮಿಸಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಪಿ.ನಾಗರಾಜ್ ಗೌಡ ಹೇಳಿದರು.

ಶಿರಾಳಕೊಪ್ಪ ಬ್ಲಾಕ್ ಕಾಂಗ್ರೆಸ್‌ನಿಂದ ನೇರಲಗಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳು ಕೇವಲ ಚುನಾವಣಾ ವಾಗ್ದಾನವಲ್ಲ. ಅವುಗಳ ಅನುಷ್ಠಾನದಿಂದ ರಾಜ್ಯದ ಲಕ್ಷಾಂತರ ಜನರಿಗೆ ನೇರ ಲಾಭ ದೊರಕಿದೆ. ಈ ವಿಚಾರಗಳನ್ನು ಮನೆ ಮನೆಗೆ ತಲುಪಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದರು.

ಕೆಪಿಸಿಸಿ ಸದಸ್ಯ ಚಂದ್ರಣ್ಣ ಬಂಜೂರ್ ಮಾತನಾಡಿ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು. ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದು, ಅದನ್ನು ಜನತೆಗೆ ತಿಳಿಸುವ ಕೆಲಸ ಆಗಬೇಕು. ವಿಪಕ್ಷದವರು ನಮ್ಮ ನಾಯಕರ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದು, ಇದಕ್ಕೆ ಚುನಾವಣೆ ಮೂಲಕ ತಕ್ಕ ಉತ್ತರ ನೀಡಬೇಕು ಎಂದರು.

ಶಿರಾಳಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಸ್.ವೀರನಗೌಡ, ಶಿಕಾರಿಪುರ ಅಧ್ಯಕ್ಷ ಪಿ.ಶಿವರಾಂ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಟಿ.ಶಿವಶಂಕ್ರಪ್ಪ, ಎಸ್.ಪಿ.ಚಂದ್ರಶೇಖರ ಗೌಡ, ಶಿರಾಳಕೊಪ್ಪ ಪುರಸಭೆ ಅಧ್ಯಕ್ಷೆ ಮಮತಾ ನಿಂಗಪ್ಪ, ಉಪಾಧ್ಯಕ್ಷ ಮುದಾಸಿರ್, ಪ್ರಮುಖರಾದ ಉಮೇಶ್, ಸುನಿಲ್, ಮಹೇಶ್, ತೇಜನಾಯ್ಕ, ಪ್ರಭುಗೌಡ, ನಾಗನ ಗೌಡ ಇತರರಿದ್ದರು.