ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಸಾಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ) ಸಾಗರ ಶಾಖೆಯಿಂದ ಉಪವಿಭಾಗಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಲಕ್ಷ್ಮಣ್ ಸಾಗರ್, ರವಿ ಜಂಬಗಾರಿ, ಧರ್ಮರಾಜ್ ಇತರರಿದ್ದರು.  
ನ್ಯೂಸ್

ಶಾಸಕ ಸ್ಥಾನದಿಂದ ವಜಾಗೊಳಿಸಲು ಆಗ್ರಹ

ಶಿವಕುಮಾರ ಎಸ್.ಪಿ.

ಸಾಗರ: ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ) ಸಾಗರ ಶಾಖೆಯಿಂದ ಮಂಗಳವಾರ ಉಪವಿಭಾಗಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ದಲಿತ ಸಮುದಾಯವನ್ನು ಬಿಜೆಪಿ ಶಾಸಕ ಮುನಿರತ್ನ ಅತ್ಯಂತ ಕೀಳುಮಟ್ಟದ ಪದಗಳಿಂದ ಬೈದಿದ್ದು, ಜಾತಿನಿಂದನೆ ಮಾಡಿದ್ದಾರೆ. ಮಹಿಳೆಯರ ಬಗ್ಗೆ ಕೆಟ್ಟದ್ದಾಗಿ ಮಾತನಾಡಿ ಅವಮಾನ ಮಾಡಿದ್ದಾರೆ. ದೂರವಾಣಿ ಸಂಭಾಷಣೆ ಜಾಲತಾಣದಲ್ಲಿ ವೈರಲ್ ಆಗಿದೆ. ದಲಿತ ಸಮುದಾಯಕ್ಕೆ ಅವಮಾನ ಮಾಡಿರುವ ಮುನಿರತ್ನ ಅವರ ಶಾಸಕ ಸ್ಥಾನ ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.
ಸಮಿತಿ ತಾಲೂಕು ಸಂಚಾಲಕ ಲಕ್ಷ್ಮಣ ಸಾಗರ್, ರವಿ ಜಂಬಗಾರು, ಧರ್ಮರಾಜ್, ಮಹಾದೇವಪ್ಪ, ಸುರೇಶ್ ಮಂಡ್ಯ, ಗುತ್ಯಪ್ಪ ಕಾನ್ಲೆ, ಸಂತೋಷ್ ಬಂದಗದ್ದೆ, ಬಸೀರ್, ವೆಂಕಟೇಶ್ ಕಾರ್ಗಲ್ ಇತರರಿದ್ದರು.