ಜೇನು ಕುರುಬರಿಗೆ ಎಸ್‌ಟಿ ಜಾತಿ ಪ್ರಮಾಣಪತ್ರ ನೀಡುವಂತೆ ಒತ್ತಾಯಿಸಿ ಅಸಂಘಟಿತ ಕಾರ್ಮಿಕರ ಸಂಘದಿಂದ ಪದಾಧಿಕಾರಿಗಳು ಡಿಸಿ ಕಚೇರಿ ಎದುರು ಪ್ರತಿಭಟಿಸಿದರು. ಸುರೇಖಾ ಪಾಲಾಕ್ಷಪ್ಪ, ಕುಪೇಂದ್ರ ಆಯನೂರು, ಲತಾ, ಪ್ರದೀಪ್ ಹೊನ್ನಪ್ಪ ಇತರರಿದ್ದರು. 
ನ್ಯೂಸ್

ಜೇನುಕುರುಬರಿಗೆ ಎಸ್‌ಟಿ ಪ್ರಮಾಣಪತ್ರ ನೀಡಲು ಆಗ್ರಹ

ಶಿವಮೊಗ್ಗ: ಜಿಲ್ಲೆಯಲ್ಲಿ ವಾಸ ಮಾಡುತ್ತಿರುವ ಜೇನು ಕುರುಬರಿಗೆ ಎಸ್‌ಟಿ ಜಾತಿ ಪ್ರಮಾಣಪತ್ರ ನೀಡುವಂತೆ ಒತ್ತಾಯಿಸಿ ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ಪದಾಧಿಕಾರಿಗಳು ಡಿಸಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಹಲವು ತಲೆಮಾರುಗಳಿಂದ ಜಿಲ್ಲೆಯಲ್ಲಿ ಜೇನು ಕುರುಬರು ವಾಸ ಮಾಡುತ್ತಿದ್ದಾರೆ. ವಿಶೇಷವಾಗಿ ಸಕ್ರೆಬೈಲ್ ಆನೆ ಬಿಡಾರದಲ್ಲಿ ಆನೆಗಳನ್ನು ಪಳಗಿಸುವುದು. ಅವುಗಳ ನಿರ್ವಹಣೆ ಮಾಡುವುದನ್ನು ವೃತ್ತಿಯಾಗಿಸಿಕೊಂಡು ಬಂದಿದ್ದಾರೆ. ಇವರಿಗೆ ಎಸ್‌ಟಿ ಜಾತಿ ಪ್ರಮಾಣ ಪತ್ರ ನೀಡುವಂತೆ ಅಟಲ್ ಜೀ ಜನಸ್ನೇಹಿ ಕೇಂದ್ರಕ್ಕೆ ಸೂಚಿಸಬೇಕು ಎಂದು ಆಗ್ರಹಿಸಿದರು.

ಮೈಸೂರು ಜಿಲ್ಲೆಯಲ್ಲಿ ಜೇನು ಕುರುಬ ಸಮುದಾಯಕ್ಕೆ ಎಸ್‌ಟಿ ಪ್ರಮಾಣ ಪತ್ರ ನೀಡಲಾಗುತ್ತಿದೆ. ಚಿಕ್ಕಮಗಳೂರು ಕಲಬುರಗಿ, ಬೀದರ್, ಯಾದಗಿರಿ ಮತ್ತು ಕೊಡಗು ಜಿಲ್ಲೆಗಳಲ್ಲೂ ಪ್ರಮಾಣಪತ್ರ ನೀಡಲು ಸೂಚನೆ ದೊರೆತಿದೆ. ಆದರೆ ನಮ್ಮ ಜಿಲ್ಲೆಯಲ್ಲಿ ಮಾತ್ರ ಈ ಸಮಾಜ ಪ್ರಮಾಣ ಪತ್ರದಿಂದ ವಂಚಿತವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಂಘದ ಸಂಸ್ಥಾಪಕ ಗೌರವಾಧ್ಯಕ್ಷ ಕುಪೇಂದ್ರ ಆಯನೂರು, ಜಿಲ್ಲಾಧ್ಯಕ್ಷೆ ಸುರೇಖಾ ಪಾಲಾಕ್ಷಪ್ಪ, ಪ್ರಮುಖರಾದ ಪ್ರದೀಪ್ ಹೊನ್ನಪ್ಪ, ನಾಗಭೂಷಣ್, ಲತಾ, ಶಾಂತಾ, ಸುಮಿತ್ರಾ, ಸುಪ್ರಿಯಾ, ರಾಜೇಶ್, ರತ್ನಮ್ಮ ಇತರರಿದ್ದರು