ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ದೇವರಾಜ ಅರಸು ಭವನಕ್ಕೆ ಎರಡು ಕೋಟಿ ರೂ. ಅನುದಾನ ಬಿಡುಗಡೆಗೆ ಒತ್ತಾಯಿಸಿ ಮಧು ಬಂಗಾರಪ್ಪ ಅವರಿಗೆ ಎಂ.ರಮೇಶ ಶಂಕರಘಟ್ಟ, ಜಿ.ಡಿ.ಮಂಜುನಾಥ್, ವಿ.ರಾಜು, ಶರತ್, ಪ್ರವೀಣ್‌ಕುಮಾರ್ ಮುಂತಾದವರು ಮನವಿ ಸಲ್ಲಿಸಿದರು. 
ನ್ಯೂಸ್

ಅರಸು ಭವನಕ್ಕೆ ಅನುದಾನ ಬಿಡುಗಡೆಗೆ ಆಗ್ರಹ

ಶಿವಮೊಗ್ಗ : ನಗರದಲ್ಲಿ ನಿರ್ಮಾಣವಾಗುತ್ತಿರುವ ಡಿ.ದೇವರಾಜ ಅರಸು ಭವನದ ಕಟ್ಟಡ ಕಾಮಗಾರಿಗೆ ಎರಡು ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದಿಂದ ಬೆಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎಂ.ರಮೇಶ್ ಶಂಕರಘಟ್ಟ ನೇತೃತ್ವದಲ್ಲಿ ಸಚಿವರನ್ನು ಭೇಟಿಯಾದ ನಿಯೋಗ, ಕಾಮಗಾರಿ ಪ್ರಾರಂಭವಾಗಿ ಮೂರು ವರ್ಷಗಳು ಕಳೆದರೂ ಕಾಮಗಾರಿ ಶೇ.70ರಷ್ಟೂ ಪೂರ್ಣಗೊಂಡಿಲ್ಲ. ಕಟ್ಟಡ ಪೂರ್ಣಗೊಳಿಸಲು ಸುಮಾರು ಎರಡು ಕೋಟಿ ರೂ. ಅವಶ್ಯವಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ವಿ.ರಾಜು, ರಾಜ್ಯ ಹಿಂದುಳಿದ ವರ್ಗಗಳ ಸಂಯೋಜಕ ಜಿ.ಡಿ.ಮಂಜುನಾಥ್, ಸೂಡಾ ನಾಮನಿರ್ದೇಶಿತ ಸದಸ್ಯ ಪ್ರವೀಣ್‌ಕುಮಾರ್, ಪ್ರಮುಖರಾದ ಶರತ್ ಮುಂತಾದವರಿದ್ದರು.