ನ್ಯೂಸ್

ದೋರಣಾಲಪಲ್ಲಿ ಶಾಲಾ ಕಟ್ಟಡ ದುರಸ್ತಿಗೆ ಒತ್ತಾಯ

ದೋರಣಾಲಪಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಶಿಥಿಲವಾದ ಕಟ್ಟಡಗಳನ್ನು ದುರಸ್ತಿಗೊಳಿಸಿ ನೂತನ ಕಟ್ಟಡ ನಿರ್ಮಿಸಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ. ಶಾಲೆಯ ಆವರಣದಲ್ಲಿ 3 ಕೊಠಡಿಗಳಿದ್ದು, 1 ಅಡಗೆ ಕೋಣೆ, ಎರಡು ಕೊಠಡಿಗಳು ಶಿಥಿಲಾವಸ್ಥೆಗೆ ತಲುಪಿದ್ದು, ದುರಸ್ತಿ ಮಾಡಬೇಕಾಗಿದೆ.

1ರಿಂದ 5ನೇ ತರಗತಿಯಲ್ಲಿ 17 ಮಕ್ಕಳು ವ್ಯಾಸಂಗ ಮಾಡುತ್ತಿದ್ದು ಒಂದೇ ಕೊಠಡಿಯಲ್ಲಿ ಕುಳಿತುಕೊಳ್ಳುತ್ತಿದ್ದಾರೆ. ಕೊಠಡಿಗಳ ಕೊರತೆಯಿಂದ ಒಂದೇ ಕೊಠಡಿಯಲ್ಲಿ ಇಬ್ಬರು ಶಿಕ್ಷಕರು ಪಾಠ ಪ್ರವಚನಗಳು ಮಾಡಬೇಕಾದ ಅನಿವಾರ್ಯತೆ ಇದೆ. ಅಡಗೆ ಕೋಣೆ ಸೋರುತ್ತಿದೆ. ಸರ್ಕಾರಿ ಶಾಲೆ ಉಳಿಸಿಕೊಳ್ಳಬೇಂಬ ಇಚ್ಚೆಯಿಂದ ಗ್ರಾಮಸ್ಥರು ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಕಳುಹಿಸದೆ ಇಲ್ಲಿನ ಶಾಲೆಗೆ ಕಳುಹಿಸುತ್ತಿರುವುದೇ ವಿಶೇಷ. ಸಂಬಂಧಪಟ್ಟ ಇಲಾಖೆ ತಕ್ಷಣ ಕಟ್ಟಡ ದುರಸ್ತಿಗೊಳಿಸಬೇಕು ಎನ್ನುವುದು ಗ್ರಾಮಸ್ಥರು ಮನವಿ.