ವಸ್ತಾರೆ ಹೋಬಳಿ ರಾಜಸ್ವ ನಿರೀಕ್ಷಕರ ವರ್ಗಾವಣೆಗೆ ಒತ್ತಾಯಿಸಿ ಸಾರ್ವಜನಿಕರು ನಾಡ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕೃಷ್ಣಪ್ರಸಾದ್, ಕೃಷ್ಣಮೂರ್ತಿ, ಚಂದ್ರಶೇಖರ್, ನವರಾಜ್, ಗಣೇಶ್ ಇದ್ದರು. 
ನ್ಯೂಸ್

ವಸ್ತಾರೆ ಹೋಬಳಿ ರಾಜಸ್ವ ನಿರೀಕ್ಷಕರ ವರ್ಗಾವಣೆಗೆ ಒತ್ತಾಯ

ಆಲ್ದೂರು: ವಸ್ತಾರೆ ಹೋಬಳಿ ರಾಜಸ್ವ ನಿರೀಕ್ಷಕರನ್ನು ವರ್ಗಾವಣೆ ಮಾಡುವತೆ ಒತ್ತಾಯಿಸಿ ಶನಿವಾರ ವಸ್ತಾರೆ ಅಂಬೇಡ್ಕರ್ ಜನಜಾಗೃತಿ ವೇದಿಕೆ ಹಾಗೂ ಸಾರ್ವಜನಿಕರು ವಸ್ತಾರೆ ನಾಡ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ ಜನಜಾಗೃತಿ ವೇದಿಕೆ ಗೌರವ ಅಧ್ಯಕ್ಷ ಲಕ್ಷ್ಮಣ್ ಕೋಟೆವೂರು ಮಾತನಾಡಿ, ವಸ್ತಾರೆ ಕಂದಾಯ ಅಧಿಕಾರಿ ಜನ ಸಾಮಾನ್ಯರ ಪರ ಕೆಲಸ ಮಾಡುತ್ತಿಲ್ಲ. ವಸ್ತಾರೆ ಹೋಬಳಿ ವ್ಯಾಪ್ತಿಗೆ 6 ಗ್ರಾಪಂಗಳು ಸೇರಿದ್ದು , ದಲಿತರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಈ ಬಗ್ಗೆ ಜನಸ್ಪಂದನಾ ಕಾರ್ಯಕ್ರಮದಲ್ಲಿ ಶಾಸಕಿ ನಯನಾ ಮೊಟಮ್ಮ ಅವರ ಗಮನಕ್ಕೆ ತಂದರೂ ಕ್ರಮಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಅಂಬೇಡ್ಕರ್ ಜನಜಾಗೃತಿ ವೇದಿಕೆ ಅಧ್ಯಕ್ಷ ಹೆಡದಾಳ್ ಕುಮಾರ್ , ಮಾತನಾಡಿ ಕಂದಾಯ ಅಧಿಕಾರಿಯನ್ನು ಬೇರೆ ಕಡೆ ವರ್ಗಾವಣೆ ಮಾಡುವಂತೆ ಜನ ಪ್ರತಿನಿಧಿಗಳು, ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರೂ ಸಕಾರಾತ್ಮಕ ಪ್ರತಿಕ್ರಿಯೆ ದೊರೆಯದ ಕಾರಣ ಇಂದು ಪ್ರತಿಭಟನೆ ನಡೆಸಲಾಗುತ್ತಿದೆ. ಅವರನ್ನು ತಕ್ಷಣ ವರ್ಗಾವಣೆ ಮಾಡದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಡಾ.ಸುಮಂತ್‌ಗೆ ಮನವಿ ಮಾಡಿದರು. ಕಾರ್ಯದರ್ಶಿ ಕೃಷ್ಣಪ್ರಸಾದ್, ಖಜಾಂಚಿ ಕೃಷ್ಣಮೂರ್ತಿ, ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಚಂದ್ರಶೇಖರ್, ಅಂಬೇಡ್ಕರ್ ಹೋರಾಟ ವೇದಿಕೆ ಅಧ್ಯಕ್ಷ ನವರಾಜ್, ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಸಮಿತಿ ಅಧ್ಯಕ್ಷ ಗಣೇಶ್,ದಿನೇಶ್, ಸತೀಶ್ , ಜಗದೀಶ್, ಬಿಎಸ್‌ಪಿ ಮುಖಂಡ ಎಂ.ಡಿ.ಶಂಕರ್ ಇದ್ದರು.