Fist hand power logo. Protest strong fist raised fight icon, rebel illustration 
ನ್ಯೂಸ್

ವಿವಿಧ ಬೇಡಿಕೆ ಈಡೇರಿಕೆಗೆ ಕಾರ್ಮಿಕರ ಆಗ್ರಹ

ಮೈಸೂರು: ಕಾರ್ಮಿಕ ಸಂಹಿತೆ ನೀತಿ ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕ ಸಂಘಗಳ ಜಂಟಿ ಸಮಿತಿ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಗಾಂಧಿ ಚೌಕದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ನಾನಾ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಕಾರ್ಮಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿದರು.
ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸುವುದರ ಜತೆಗೆ ಬಡವರು ಬದುಕಲು ಅವಕಾಶ ಕಲ್ಪಿಸುವ ನೀತಿಯನ್ನು ಜಾರಿಗೊಳಿಸಬೇಕು. ರೈತ ವಿರೋಧಿ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು. ಬೆಳೆಗಳಿಗೆ ಲಾಭದಾಯಕ ಬೆಂಬಲ ಬೆಲೆ ನೀಡುವುದರ ಜತೆಗೆ ಎಂಪಿಎಂಸಿ ಬಲವರ್ಧನೆಗೊಳಿಸಬೇಕು. ಕೃಷಿ ಹಿಡುವಳಿಗೆ ಸಬ್ಸಿಡಿ ಕಡಿತಗೊಳಿಸುವ ನೀತಿಗಳನ್ನು ಕೈಬಿಡಬೇಕು. ಸಾರ್ವಜನಿಕ ಕ್ಷೇತ್ರವನ್ನು ಖಾಸಗೀಕರಣ ಮಾಡುವ ಹುನ್ನಾರ ಕೈಬಿಡಬೇಕು ಎಂದು ಒತ್ತಾಯಿಸಿದರು. ಪ್ರಮುಖರಾದ ಎನ್.ಕೆ.ದೇವದಾಸ್, ಶೇಷಾದ್ರಿ ಇತರರಿದ್ದರು.