ಶಿವಮೊಗ್ಗ: ಕಳೆದ ಒಂದು ತಿಂಗಳಲ್ಲಿ ಜಿಲ್ಲೆಯ 390 ಜನರ ರಕ್ತಪರೀಕ್ಷೆ ನಡೆಸಲಾಗಿದೆ. ಈ ಪೈಕಿ 28 ಮಂದಿಯಲ್ಲಿ ಡೆಂೆ ಪತ್ತೆಯಾಗಿದೆ. ಪರೀಕ್ಷೆ ನಡೆಸಿದ 223 ರೋಗಿಗಳಲ್ಲಿ 23 ಜನರಲ್ಲಿ ಚಿಕೂನ್‌ಗುನ್ಯಾ ಕಂಡುಬಂದಿದೆ. ಇವರೆಲ್ಲರಿಗೂ ಸಕಾಲದಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ಡೆಂೆ, ಕೆಎಫ್‌ಡಿ ಹಾಗೂ ಚಿಕೂನ್‌ಗೂನ್ಯಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯ ಯಾವುದೇ ಭಾಗದ ಜನರಲ್ಲಿ ಜ್ವರ ಕಾಣಿಸಿಕೊಂಡರೆ ಉದಾಸೀನ ಮಾಡದೆ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಹೇಳಿದರು.
ಪ್ರತಿವರ್ಷ ಬೇಸಿಗೆಯಲ್ಲಿ ಈ ಕಾಯಿಲೆಗಳು ಉಲ್ಬಣಗೊಳ್ಳಬಹುದಾದ ಸಾಧ್ಯತೆಗಳಿವೆ. ಇವುಗಳ ನಿಯಂತ್ರಣಕ್ಕೆ ಜಿಲ್ಲಾಡಳಿತ ಎಲ್ಲ ಕ್ರಮಗಳನ್ನೂ ಕೈಗೊಂಡಿದೆ. ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜನರು ಈ ವಿಷಯದಲ್ಲಿ ಮುಂಜಾಗ್ರತೆ ವಹಿಸಬೇಕು ಎಂದು ತಿಳಿಸಿದರು.
ಸುತ್ತಮುತ್ತಲಿನ ಪ್ರದೇಶದಲ್ಲಿ ಸೊಳ್ಳೆಗಳು ಉತ್ಪತ್ತಿಯಾಗದಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಲಾರ್ವಾಗಳನ್ನು ನಾಶಪಡಿಸಲು ಗಮನಹರಿಸಬೇಕು. ಸೊಳ್ಳೆಗಳ ಸಂತಾನೋತ್ಪತ್ತಿಯಾಗದಂತೆ ನೋಡಿಕೊಳ್ಳಬೇಕು. ವೈದ್ಯಾಧಿಕಾರಿಗಳು ಡೆಂೆ ತಪಾಸಣೆಗೆ ಹೆಚ್ಚಿನ ಗಮನ ಹರಿಸಬೇಕು. ಯಾವುದೇ ರೋಗಿಯನ್ನು ನಿರ್ಲಕ್ಷಿಸದೆ ಸಕಾಲಿಕವಾಗಿ ಚಿಕಿತ್ಸೆ ನೀಡಬೇಕು. ನಿಗದಿತ ಸಮಯಕ್ಕೆ ಲಾರ್ವಾ ಸಮೀಕ್ಷೆ ನಡೆಸಬೇಕು ಎಂದು ಸೂಚಿಸಿದರು.
ಜಿಪಂ ಸಿಇಒ ಎನ್.ಹೇಮಂತ್, ಡಿಎಫ್‌ಒ ಶಿವಶಂಕರ್, ಡಿಎಚ್‌ಒ ಡಾ. ನಟರಾಜ್, ಜಿಲ್ಲಾ ಸರ್ಜನ್ ಡಾ. ಸಿದ್ದನಗೌಡ ಪಾಟೀಲ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರಾಜ ನಾಯ್ಕ, ಜಿಲ್ಲಾ ಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ. ಗುಡುದಪ್ಪ ಕಸಬಿ ಮುಂತಾದವರಿದ್ದರು.