ನ್ಯೂಸ್

ಡೆಂೆ ವಿರೋಧಿ ಜಾಗೃತಿ ಜಾಥಾ


ವಿಜಯವಾಣಿ ಸುದ್ದಿಜಾಲ ಎಚ್.ಡಿ.ಕೋಟೆ
ಡೆಂೆ ಜ್ವರ ಸೊಳ್ಳೆಗಳ ಮೂಲಕ ಹರಡಲಿದ್ದು ಸಾಮಾನ್ಯವಾಗಿ ಸೋಂಕು ತಗುಲಿದ ಮೂರು ಅಥವಾ ಹದಿನಾಲ್ಕು ದಿನಗಳಲ್ಲಿ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ ಎಂದು ತಹಸೀಲ್ದಾರ್ ಆರ್.ಮಂಜುನಾಥ್ ತಿಳಿಸಿದರು.
ಪಟ್ಟಣದಲ್ಲಿ ಮಂಗಳವಾರ ಆಯೋಜಿಸಿದ್ದ ಡೆಂೆ ವಿರೋಧಿ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿ, ಹೆಚ್ಚು ಜ್ವರ, ತಲೆನೋವು, ವಾಂತಿ, ಸ್ನಾಯು ಮತ್ತು ಸಂಧಿನೋವು ಮತ್ತು ವಿಶಿಷ್ಟ ಚರ್ಮದ ಗುಳ್ಳೆಗಳು ಈ ರೋಗದ ಲಕ್ಷಣಗಳು ಎಂದರು.
ಡೆಂೆ ಕಾಣಿಸಿಕೊಂಡರೆ ಗುಣಮುಖರಾಗಲು ಎರಡರಿಂದ ಏಳು ದಿನಗಳ ಕಾಲ ಬೇಕು. ಕೆಲವೊಮ್ಮೆ ಈ ರೋಗ ಮಾರಣಾಂತಿಕವಾಗಿ ಪರಿಣಮಿಸಬಹುದು ಎಂದು ತಿಳಿಸಿದರು.
ಜಾಥಾದಲ್ಲಿ ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಚಿದಂಬರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಿವಪ್ರಸಾದ್, ತಾಲೂಕು ನೋಡಲ್ ಅಧಿಕಾರಿ ಗಿರೀಶ್, ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್, ಆಡಳಿತ ವೈದ್ಯಾಧಿಕಾರಿ ಡಾ.ಭಾಸ್ಕರ್, ತಾಲೂಕು ಕಾರ್ಯಪಡೆ ಸದಸ್ಯ ಉಮೇಶ್, ಗೀತಾ, ಆರೋಗ್ಯ ಇಲಾಖೆಯ ಮೇಲ್ವಿಚಾರಕರು ಮತ್ತು ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.