ನ್ಯೂಸ್

Rain Alert: ಚಳಿಯ ಮಧ್ಯೆಯೂ ಕರ್ನಾಟಕದ ಹಲವೆಡೆ ಮಳೆ ಆಗುವ ಸಾಧ್ಯತೆ...

Rain Alert: ಕರ್ನಾಟಕದ ಹಲವೆಡೆ  ಮುಂದಿನ 24 ಗಂಟೆಗಳ ಕಾಲ ಭರ್ಜರಿ ಮಳೆ ಬೀಳಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡ ಮಂಜಿನ ವಾತಾವರಣ ಇರಲಿದೆ. ಸಂಜೆ ವೇಳೆಗೆ ನಗರದ ಹಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲೂ ವರುಣನ ಆರ್ಭಟ ಜೋರಾಗಿ ಇರಲಿದೆ.

ಮೈಸೂರು, ಕೊಡಗು, ಹಾಸನ, ರಾಮನಗರ, ತುಮಕೂರು, ವಿಜಯನಗರ, ಚಿಕ್ಕಬಳ್ಳಾಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಬೆಳಗ್ಗೆಯಿಂದಲೇ ಬೆಂಗಳೂರಿನಲ್ಲಿ ಮೋಡ ಮಂಜಿನ ವಾತಾವರಣ ಇದೆ. ಸಂಜೆ ವೇಳೆಗೆ ನಗರದ ಹಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ.