ನ್ಯೂಸ್

ದೇವೇಗೌಡರು ಅಧಿಕಾರಕ್ಕಾಗಿ ರಾಜಕಾರಣ ಮಾಡಿಲ್ಲ; ನಿಖಿಲ್ ಕುಮಾರಸ್ವಾಮಿ |Deve Gowda did not politicize for power

ಬೆಂಗಳೂರು: ಮಾಜಿ ಪ್ರಧಾನಿಗಳಾದ ದೇವೇಗೌಡರು ಅಧಿಕಾರಕ್ಕಾಗಿ ಎಂದೂ ರಾಜಕಾರಣ ಮಾಡಿಲ್ಲ (Devegowda did not politicize for power) , ಮಾಡುವುದೂ ಇಲ್ಲ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ(Nikhil Kumaraswamy) ಚನ್ನಪಟ್ಟಣ ಶಾಸಕ ಸಿ.ಪಿ. ಯೋಗೇಶ್ವರ್‌ಗೆ ತಿರುಗೇಟು ನೀಡಿದರು.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈಗ ದೇವೆಗೌಡರ ವಯಸ್ಸು 92 ವರ್ಷ. ದೇಶ ಮತ್ತು ರಾಜ್ಯ ಕಟ್ಟಲು ಅವರ ಮಾರ್ಗದರ್ಶನ ಬೇಕು ಎಂದು ಅನೇಕ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರೇ ಹೇಳಿದ್ದಾರೆ. ಹಾಗಾಗಿ ಇಲ್ಲಿ ಅಧಿಕಾರ ದಾಹಕ್ಕೆ, ಅಧಿಕಾರಕ್ಕೆ ಅಂಟಿಕೊಂಡು ದೇವೇಗೌಡರು ರಾಜಕಾರಣ ಮಾಡುತ್ತಿಲ್ಲ ಎಂದರು. ದೇವೇಗೌಡರು ರಾಜಕೀಯ ನಿವೃತ್ತಿ ಘೋಷಿಸಲಿ ಎಂಬ ಸಿಪಿ ಯೋಗೇಶ್ವರ್ ಹೇಳಿಕೆಗೆ ತಿರುಗೇಟು ನೀಡಿದ ಅವರು, ದೇವೇಗೌಡರ 62 ವರ್ಷಗಳ ಅವರ ರಾಜಕೀಯ ಬದುಕಿನಲ್ಲಿ ಏನನ್ನೂ ಅಪೇಕ್ಷೆ ಇಟ್ಟುಕೊಂಡವರಲ್ಲ. ಅಷ್ಟು ಸುದೀರ್ಘ ರಾಜಕೀಯ ಜೀವನದಲ್ಲಿ ಅವರು ಕೇವಲ ಮೂರೂವರೆ ವರ್ಷ ಮಾತ್ರ ಅಧಿಕಾರದಲ್ಲಿ ಇದ್ದರು. ಈಗೇನು ಅವರು ಮತ್ತೆ ಪ್ರಧಾನಿ ಆಗಲಿಕ್ಕೆ ರಾಜಕೀಯ ಮಾಡುತ್ತಿದ್ದಾರೆಯೇ? ಅವರು ನಿವೃತ್ತಿ ಹೊಂದಬೇಕಾ? ಎಂದು ಕಿಡಿಕಾರಿದರು.

ನಮ್ಮ ಅವಶ್ಯಕತೆ ಆ ಸಮುದಾಯಕ್ಕೆ ಇಲ್ಲ

ಒಂದು ಸಮುದಾಯದ ಪರವಾಗಿ ದೇವೇಗೌಡರು ಈ ಹಿಂದೆ ಅನೇಕ ಹೋರಾಟ ಮಾಡಿದ್ದರು, ಮೀಸಲಾತಿ ನೀಡಿದ್ದರು. ಆದರೆ, ನಮ್ಮ ಅವಶ್ಯಕತೆ ಅವರಿಗೆ ಇಲ್ಲ ಎಂದು ಆ ಸಮುದಾಯದವರು ಸ್ಪಷ್ಟ ಸಂದೇಶ ಕೊಟ್ಟಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಪರೋಕ್ಷವಾಗಿ ಮುಸ್ಲಿಂ ಸಮುದಾಯ ಉದ್ದೇಶಿಸಿ ಟಾಂಗ್ ಕೊಟ್ಟರು.