ನ್ಯೂಸ್

ಮಗು ಅಳುತ್ತಿದ್ದಕ್ಕೆ ಸಿಟ್ಟಿಗೆ ಗೋಡೆಗೆ ಬಿಸಾಡಿದ ತಂದೆ; ಚಿಕಿತ್ಸೆ ಫಲಿಸದೇ ಕಂದಮ್ಮ ಸಾವು

ಧಾರವಾಡ: ತಂದೆಯಿಂದಲೇ ನೆಲಕ್ಕೆ ಎಸೆಯಲ್ಪಟ್ಟಿದ್ದ ಹೆಣ್ಣು ಮಗು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ. ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.

ಶ್ರೇಯಾ (1 ವರ್ಷ) ಮೃತ ದುರ್ದೈವಿ ಕಂದಮ್ಮ. ಈಕೆಯನ್ನು ತಂದೆ ಶಂಭುಲಿಂಗಯ್ಯ ಕೊಲೆ ಮಾಡಿದ್ದಾನೆ. ಈತ ಧಾರವಾಡ ತಾಲೂಕಿನ ಯಾದವಾಡ ಗ್ರಾಮದ ನಿವಾಸಿ.

ನಡೆದಿದ್ದೇನು?:  ಕಳೆದ ರಾತ್ರಿ ಮಗು ಅಳುತ್ತಿತ್ತು. ಅಳುವ ಮಗುವಿಗೆ ಸಮಾಧಾನ ಪಡಿಸುವ ಬದಲಿಗೆ ಮಗುವಿನ ಕಾಲು ಹಿಡಿದು ಗೋಡೆಗೆ ಎಸೆದಿದ್ದಾನೆ.ಗೋಡೆಗೆ ರಭಸವಾಗಿ ಎಸೆದ ಪರಿಣಾಮ ಮಗುವಿನ ತಲೆಗೆ ಬಲವಾದ ಪೆಟ್ಟಾಗಿದೆ. ಕೂಡಲೇ ಮಗುವಿನ ತಾಯಿ ಕಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.   ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದರಿಂದ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.

ಸದ್ಯ ಕುಟುಂಬಸ್ಥರಿಂದ ಗರಗ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪಾಪಿ ತಂದೆ ಶಂಬುಲಿಂಗಯ್ಯನನ್ನು ಬಂಧಿಸಿದ್ದಾರೆ.