ಬೆಂಗಳೂರು: ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ ಗೆಳೆಯನ ಹುಟ್ಟುಹಬ್ಬಕ್ಕೆ ಭರ್ಜರಿ ಸರ್ಪ್ರೈಸ್ ಕೊಟ್ಟಿದ್ದಾರೆ. ದುಬಾರಿ ಉಡುಗೊರೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಈ ಕುರಿತಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಧ್ರುವ ಸರ್ಜಾ, ತಮ್ಮ ಆತ್ಮೀಯ ಗೆಳೆಯ ಹಾಗೂ ಮ್ಯಾನೇಜರ್ ಅಶ್ವಿನ್ ಹುಟ್ಟುಹಬ್ಬಕ್ಕೆ 52 ಲಕ್ಷ ರೂ. ಮೌಲ್ಯದ ಟೊಯೋಟಾ ಫಾರ್ಚುನರ್ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.
ವಿಡಿಯೋದಲ್ಲಿ ಏನಿದೆ?: ಅಶ್ವಿನ್ ಹುಟ್ಟುಹಬ್ಬದಂದು ಗೆಳೆಯನನ್ನು ಕರೆದುಕೊಂಡು ಹೋಗಿ ಆಶ್ಚರ್ಯವಾಗುವಂತೆ ಗಿಫ್ಟ್ ಆಗಿ ಕಾರನ್ನು ನೀಡಿದ್ದಾರೆ. ಅಶ್ವಿನ್ ಚಿಕ್ಕ ವಯಸ್ಸಿನಲ್ಲಿ ಇರುವಾಗಲೇ ಆವರ ತಂದೆ ನಿಧನರಾಗಿದ್ದಾರೆ. ಕಾರಿನ ಜೊತೆಗೆ ಅಶ್ವಿನ್ ಅವರಿಗೆ ಮರೆಯಲಾದ ಫೋಟೋವನ್ನು ಗಿಫ್ಟ್ ಆಗಿ ನೀಡಿದ್ದಾರೆ. ಅಶ್ವಿನ್ರ ಅಪ್ಪ-ಅಮ್ಮನ ಹಳೆಯ ಫೋಟೋವನ್ನು ಹುಡುಕಿ ಅದನ್ನು ಕಾರಿನ ಒಳಗೆ ಇರಿಸಿದ್ದಾರೆ. ಗೆಳೆಯ ಧ್ರುವ ಕೊಟ್ಟ ಈ ಉಡುಗೊರೆ ಕಂಡು ಅಶ್ವಿನ್ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಬಳಿಕ ಕೇಕ್ ಕತ್ತರಿಸಿ ಗೆಳೆಯ ಹುಟ್ಟುಹಬ್ಬ ಆಚರಿಸಿದರು.
ಧ್ರುವ ಸರ್ಜಾ ಸದ್ಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾ ಕೆಲಸಗಳ ಜೊತೆಗೆ ಆಗಾಗ ಮಾನವೀಯ ಕೆಲಸಗಳ ಮೂಲಕವೂ ಸುದ್ದಿಯಲ್ಲಿರುತ್ತಾರೆ.