Baba Vanga : ಬಲ್ಗೇರಿಯನ್ನ ನಿಗೂಢ ಮಹಿಳೆ, ಅತೀಂದ್ರಿಯ ಭವಿಷ್ಯಗಾರ್ತಿ ಎಂದೇ ಖ್ಯಾತಿ ಪಡೆದಿರುವ ಬಾಬಾ ವಂಗಾ ಅವರ ಭವಿಷ್ಯವಾಣಿ ಇದಾಗಲೇ ಜಗದ್ವಿಖ್ಯಾತಿ ಪಡೆದಿದೆ. ಉಗ್ರರು ಅಮೆರಿಕದ ಮೇಲೆ ನಡೆಸಿದ ದಾಳಿ (9/11), ಚೆರ್ನೋಬಿಲ್ ದುರಂತ, ಪ್ರಿನ್ಸೆಸ್ ಡಯಾನಾ ಸಾವು, 2004ರ ಥಾಯ್ಲೆಂಡ್ ಸುನಾಮಿ, ಬರಾಕ್ ಒಬಾಮಾ ಅಧ್ಯಕ್ಷ ಪಟ್ಟಕ್ಕೇರುವುದು…ಇಂಥ ನೂರಾರು ಘಟನೆಗಳ ಕುರಿತು ಹಲವು ದಶಕಗಳ ಮುಂಚೆಯೇ ನುಡಿದಿದ್ದರು ಇವರು. ಅಷ್ಟೇ ಏಕೆ ಮಹಾಮಾರಿ ಕರೊನಾ ವೈರಸ್ ಕುರಿತು ಅವರು ಮಾಹಿತಿ ನೀಡಿದ್ದರು ಎನ್ನಲಾಗಿದೆ. 15ನೇ ಶತಮಾನದ ಜ್ಯೋತಿಷಿ ನಾಸ್ಟ್ರಾಡಮಸ್‌ಗೆ ಬಾಬಾ ವಂಗಾ ಅವರನ್ನು ಹೋಲಿಕೆ ಮಾಡಲಾಗುತ್ತದೆ. ಅವರ ಭವಿಷ್ಯವಾಣಿಗಳು ಶೇಕಡ 85ರಷ್ಟು ನಿಖರ ಎನ್ನಲಾಗುತ್ತಿದೆ.
ತಾಜಾ ಸಂಗತಿ ಏನೆಂದರೆ, ಏಪ್ರಿಲ್ 22ರ ಮಂಗಳವಾರದಂದು ಕಾಶ್ಮೀರದ ಪಹಲ್ಗಾಮ್ ಗಿರಿಧಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟರು. ಇದರ ಬೆನ್ನಲ್ಲೇ ಬಾಬಾ ವಂಗಾ ಅವರ ಭವಿಷ್ಯವಾಣಿಗಳು ಮತ್ತೆ ಚರ್ಚೆಯಾಗುತ್ತಿವೆ. ಈ ಬಾರಿ, ಭಯೋತ್ಪಾದನೆ ಮತ್ತು ಜಾಗತಿಕ ಯುದ್ಧದ ಬಗ್ಗೆ ವಂಗಾ ಅವರ ಭವಿಷ್ಯವಾಣಿಗಳು ಗಮನ ಸೆಳೆಯುತ್ತಿವೆ.
2047ರ ವೇಳೆಗೆ ಇಸ್ಲಾಮಿಕ್ ಪ್ರಾಬಲ್ಯ ಹೊರಹೊಮ್ಮುತ್ತದೆ ಎಂಬುದು ಬಾಬಾ ವಂಗಾ ಅವರ ಭವಿಷ್ಯವಾಣಿಗಳಲ್ಲಿ ಒಂದಾಗಿತ್ತು. ಇದರ ಜೊತೆಗೆ, 2025ರಲ್ಲಿ ಜಾಗತಿಕವಾಗಿ ದೊಡ್ಡ ಪ್ರಕ್ಷುಬ್ಧತೆ ಮತ್ತು ಯುರೋಪಿನಲ್ಲಿ ದೊಡ್ಡ ಯುದ್ಧಗಳು ಉಂಟಾಗುತ್ತವೆ ಎಂದು ವಂಗಾ ಭವಿಷ್ಯ ನುಡಿದಿದ್ದರು. ಇದೀಗ ಪಹಲ್ಗಾಮ್ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಘ್ನತೆ ಹೆಚ್ಚಿದ್ದು, ಯುದ್ಧದ ಭೀತಿ ಆವರಿಸಿಕೊಂಡಿದೆ. ಹೀಗಾಗಿ ಬಾಬಾ ವಂಗಾ ಅವರ ಭವಿಷ್ಯವಾಣಿಯಂತೆಯೇ ಎಲ್ಲವೂ ನಡೆಯುತ್ತಿದೆ ಎಂದು ಹೇಳಲಾಗುತ್ತದೆ.
ವರದಿಗಳ ಪ್ರಕಾರ, ಬಾಬಾ ಅವರು 1911ರಲ್ಲಿ ಉತ್ತರ ಮ್ಯಾಸಿಡೋನಿಯಾದ ಸ್ಟ್ರುಮಿಕಾದಲ್ಲಿ ಜನಿಸಿದರು. ಅವರ ಮೂಲ ಹೆಸರು ವಾಂಜೆಲಿಯಾ ಪಾಂಡೆವಾ ಡಿಮಿಟ್ರೋವಾ ಎಂದು. ತಮ್ಮ 12ನೇ ವಯಸ್ಸಿನಲ್ಲಿ ಭಾರೀ ಚಂಡಮಾರುತದ ಸಮಯದಲ್ಲಿ ನಿಗೂಢವಾಗಿ ದೃಷ್ಟಿ ಕಳೆದುಕೊಂಡರಂತೆ. 1996ರಲ್ಲಿ ಮೃತಪಟ್ಟಿರುವ ಬಾಬಾ ವಂಗಾ 5079ನೇ ಇಸವಿಯವರೆಗೂ ಏನೇನಾಗಲಿದೆ ಎನ್ನುವುದನ್ನು ಕಂಡು ಕೊಂಡಿದ್ದಾಗಿ ಹೇಳಿದ್ದು, ಅದನ್ನು ಸಮಾಜಕ್ಕೆ ತಿಳಿಸಿಯೇ ಕೊನೆಯುಸಿರೆಳೆದಿದ್ದರು ಎಂದು ಹೇಳಲಾಗಿದೆ.
ಉಗ್ರರು ಅಮೆರಿಕದ ಮೇಲೆ ನಡೆಸಿದ ದಾಳಿ (9/11), ಚೆರ್ನೋಬಿಲ್ ದುರಂತ, ಪ್ರಿನ್ಸೆಸ್ ಡಯಾನಾ ಸಾವು, 2004ರ ಥಾಯ್ಲೆಂಡ್ ಸುನಾಮಿ, ಬರಾಕ್ ಒಬಾಮಾ ಅಧ್ಯಕ್ಷ ಪಟ್ಟಕ್ಕೇರುವುದು…ಇಂಥ ನೂರಾರು ಘಟನೆಗಳ ಕುರಿತು ಹಲವು ದಶಕಗಳ ಮುಂಚೆಯೇ ನುಡಿದಿದ್ದರು ಇವರು. ಅಷ್ಟೇ ಏಕೆ ಮಹಾಮಾರಿ ಕರೊನಾ ವೈರಸ್ ಕುರಿತು ಅವರು ಮಾಹಿತಿ ನೀಡಿದ್ದರು ಎನ್ನಲಾಗಿದೆ. 15ನೇ ಶತಮಾನದ ಜ್ಯೋತಿಷಿ ನಾಸ್ಟ್ರಾಡಮಸ್‌ಗೆ ಬಾಬಾ ವಂಗಾ ಅವರನ್ನು ಹೋಲಿಕೆ ಮಾಡಲಾಗುತ್ತದೆ. ಅವರ ಭವಿಷ್ಯವಾಣಿಗಳು ಶೇಕಡ 85ರಷ್ಟು ನಿಖರ ಎನ್ನಲಾಗುತ್ತಿದೆ.
ಬಾಬಾ ವಂಗಾ ಭವಿಷ್ಯವಾಣಿ ಪ್ರಕಾರ ಮುಂಬರುವ ವರ್ಷದಲ್ಲಿ ಅಂದರೆ, 2025ರಲ್ಲಿ ಯುರೋಪಿನಲ್ಲಿ ಭಾರಿ ಯುದ್ಧದ ಮುನ್ಸೂಚನೆ ನೀಡಿದ್ದಾರೆ. ಈ ಯುದ್ಧದಿಂದ ವ್ಯಾಪಕ ವಿನಾಶ ಮತ್ತು ಗಮನಾರ್ಹ ಜನಸಂಖ್ಯೆಯಷ ನಷ್ಟಕ್ಕೆ ಕಾರಣವಾಗುತ್ತದೆಯಂತೆ. ಈ ಯುದ್ಧವು ಯುರೋಪ್ ಖಂಡವನ್ನೇ ಧ್ವಂಸಗೊಳಿಸುತ್ತದೆಯಂತೆ. 2025ರಲ್ಲಿ ನಡೆಯುವ ಘಟನೆಗಳು ಜಾಗತಿಕ ವಿನಾಶದ ಆರಂಭಕ್ಕೆ ಕಾರಣವಾಗಿ, 5079ಕ್ಕೆ ವಿಶ್ವವೇ ಅಂತ್ಯವಾಗಲಿದೆ. ಅಂದರೆ, 2025ರಿಂದ ಜಗತ್ತಿನ ವಿನಾಶ ಆರಂಭವಾಗಲಿದೆ ಎಂದು ಬಾಂಬಾ ವಂಗಾ ಭಯಾನಕ ಭವಿಷ್ಯ ನುಡಿದಿದ್ದಾರೆ.
ಇನ್ನು 2025ರಲ್ಲಿ ಸೈಬರ್ ದಾಳಿಯ ಮುನ್ಸೂಚನೆ ನೀಡಲಾಗಿದೆ. ನೀರು, ಶಕ್ತಿ ಮತ್ತು ಸಂವಹನ ವ್ಯವಸ್ಥೆಗಳನ್ನು ಒಳಗೊಂಡಂತೆ ಅಗತ್ಯ ಜಾಗತಿಕ ಮೂಲಸೌಕರ್ಯವನ್ನು ಗುರಿಯಾಗಿಟ್ಟುಕೊಂಡು ಸಂಘಟಿತ ಸೈಬರ್ ದಾಳಿ ನಡೆಯಲಿದೆ ಎಂದು ಬಾಬಾ ವಂಗಾ ಭವಿಷ್ಯ ನುಡಿದಿದ್ದಾರೆ. ಪ್ರಸ್ತುತ ಜಾಗತಿಕವಾಗಿ ಹೆಚ್ಚುತ್ತಿರುವ ಸೈಬರ್ ದೋಷಗಳಿಂದ ಭವಿಷ್ಯದಲ್ಲಿ ಸೈಬರ್ ವಾರ್‌ಫೇರ್ ಮತ್ತು ಡಿಜಿಟಲ್ ಮೂಲಸೌಕರ್ಯದ ದುರ್ಬಲತೆಯ ಬಗ್ಗೆ ಕಳವಳ ವ್ಯಕ್ತವಾಗಿದೆ.
ಇನ್ನು ಹವಾಮಾನ ಬದಲಾವಣೆಗಳಿಗೆ ಸಂಬಂಧಿಸಿದ ಪರಿಸರ ವಿಪತ್ತುಗಳು ಕೂಡ ಬಾಬಾ ವಂಗಾರ 2025ರ ಮುನ್ಸೂಚನೆಯ ಭಾಗವಾಗಿದೆ. ಭೂಮಿಯ ಕಕ್ಷೆಯಲ್ಲಿನ ಬದಲಾವಣೆಗಳಿಂದ ಪ್ರಾಕೃತಿಕ ವಿಕೋಪಗಳು ಸಂಭವಿಸಲಿದ್ದು, ವಿನಾಶಕಾರಿ ಬರಗಳು, ಕಾಡ್ಗಿಚ್ಚುಗಳು ಮತ್ತು ಬಿರುಗಾಳಿಗಳಿಗೆ ಕಾರಣವಾಗುತ್ತದೆ ಎಂದು ವಂಗಾ ಹೇಳಿದ್ದಾರೆ. ಇದೆಲ್ಲದರ ನಡುವೆ ಪಾಸಿಟಿವ್ ಅಂಶವೇನೆಂದೆರೆ, 2025ರಲ್ಲಿ ವೈದ್ಯಕೀಯ ಪ್ರಗತಿಯನ್ನು ಬಾಬಾ ವಂಗಾ ಊಹಿಸಿದ್ದಾರೆ. ನಿರ್ದಿಷ್ಟವಾಗಿ ಲ್ಯಾಬ್ನಲ್ಲಿ ಬೆಳೆದ ಮಾನವ ಅಂಗಗಳಿಂದ ಜೀವಿತಾವಧಿಯನ್ನು ತೀವ್ರವಾಗಿ ಸುಧಾರಿಸಬಹುದು ಎಂದು ಬಾಬಾ ವಂಗಾ ಹೇಳಿದ್ದಾರೆ.
ಇಡೀ ಜಗತ್ತಿನ ನೂರಾರು ವರ್ಷಗಳ ಹಾಗುಹೋಗುಗಳ ಬಗೆಗೆ ಭವಿಷ್ಯ ನುಡಿದಿರುವ ಬಾಗಾ ವಂಗಾ ಪ್ರಕಾರ, 5079ಕ್ಕೆ ಜಗತ್ತು ಕೊನೆಯಾಗುತ್ತದೆ. 2028ರಲ್ಲಿ ಮಾನವರು ಶುಕ್ರವನ್ನು ಭೇಟಿ ಮಾಡುತ್ತಾರೆ, 2033ರಲ್ಲಿ ಧ್ರುವೀಯ ಮಂಜುಗಡ್ಡೆಗಳು ಕರಗಿ, ಜಾಗತಿಕವಾಗಿ ಸಮುದ್ರ ಮಟ್ಟವು ವೇಗವಾಗಿ ಏರುತ್ತೆ, ಮುಸ್ಲಿಮರು 2043 ರಲ್ಲಿ ಯುರೋಪ್ ಅನ್ನು ಆಳುತ್ತಾರೆ, 2076ರಲ್ಲಿ ಕಮ್ಯುನಿಸಂ ಪ್ರಪಂಚದಾದ್ಯಂತ ಹರಡುತ್ತದೆ, 2130ರಲ್ಲಿ ಮಾನವರು ಅನ್ಯಗ್ರಹ ಜೀವಿಗಳೊಂದಿಗೆ ಸಂಪರ್ಕ ಹೊಂದುತ್ತಾರೆ, 2170ರಲ್ಲಿ ಭೂಮಿಯ ಬಹುತೇಕ ಭಾಗಗಳಲ್ಲಿ ಬರ ಉಂಟಾಗುತ್ತದೆ, 3005ರಲ್ಲಿ ಭೂಮಿಯು ಮಂಗಳದ ನಾಗರಿಕತೆಯೊಂದಿಗೆ ಯುದ್ಧದಲ್ಲಿ ತೊಡಗುತ್ತದೆ, 3797ರಲ್ಲಿ ವಾಸಯೋಗ್ಯವಲ್ಲದ ಕಾರಣ ಮಾನವರು ಭೂಮಿಯಿಂದ ಸ್ಥಳಾಂತರವಾಗುತ್ತಾರೆ ಮತ್ತು 5079 ರಲ್ಲಿ ಬ್ರಹ್ಮಾಂಡವು ಕೊನೆಗೊಳ್ಳುತ್ತದೆ ಎಂದು ಬಾಂಬಾ ವಂಗಾರ ಭವಿಷ್ಯದ ಭವಿಷ್ಯವಾಣಿಗಳಾಗಿವೆ. (ಏಜೆನ್ಸೀಸ್)