ನ್ಯೂಸ್

ಭಾರತೀಯ ನೌಕಾಪಡೆಯ ಡೈರೆಕ್ಟರ್​ ಜನರಲ್​ ರಾಕೇಶ್ ಪಾಲ್ ಹೃದಯಾಘಾತದಿಂದ ನಿಧನ

ಚೆನ್ನೈ: ಭಾರತೀಯ ನೌಕಾಪಡೆಯ ಡೈರೆಕ್ಟರ್​ ಜನರಲ್​ ರಾಕೇಶ್ ಪಾಲ್ ಅವರು ಹೃದಯಾಘಾತದಿಂದ ಇಂದು ಚೆನ್ನೈನಲ್ಲಿ ವಿಧಿವಶರಾಗಿದ್ದಾರೆ.

ಇಂದು ಮಧ್ಯಾಹ್ನ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಭೇಟಿ ಹಿನ್ನಲೆಯಲ್ಲಿ ಐಎನ್​​ಎಸ್​​ ಅಡ್ಯಾರ್ ನೌಕೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾಗ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಕೂಡಲೇ ಚೆನ್ನೈನ ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಗೆ (ಆರ್ಜಿಜಿಹೆಚ್) ದಾಖಲಿಸಲಾಗಿತ್ತು. ಆದರೆ ವೈದ್ಯರ ಸತತ ಪ್ರಯತ್ನದ ಬಳಿಕವೂ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಸಂಜೆ 7 ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹಾಗೂ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಗೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ.