ನ್ಯೂಸ್

102 ವರ್ಷದ ಶತಾಯುಷಿಗೆ ಅಭಿನಂದನಾ ಪತ್ರ ವಿತರಣೆ

ಹಾವೇರಿ: ಹಿರಿಯ ನಾಗರಿಕರ ದಿನಾಚರಣೆ ನಿಮಿತ್ತ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದ 102 ವರ್ಷದ ಶತಾಯುಷಿ ಕಾತನಾಬಿ ಪಠಾಣ ಅವರ ಮನೆಗೆ ತೆರಳಿದ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅಭಿನಂದನಾ ಪತ್ರ ನೀಡಿ ಗೌರವಿಸಿದರು.
ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಡಾ. ಚೆನ್ನಪ್ಪ, ತಹಸೀಲ್ದಾರ್ ಶಂಕರ ಜಿ.ಎಸ್. ಮತ್ತಿತರರು ಉಪಸ್ಥಿತರಿದ್ದರು.