ನ್ಯೂಸ್

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ನ. 21ರಂದು

ಹಾವೇರಿ: ಜಿಲ್ಲಾಡಳಿತ, ಜಿಪಂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನ. 21ರಂದು ಬೆಳಗ್ಗೆ 9-30ಕ್ಕೆ ನಗರದ ಜಿಲ್ಲಾ ಗುರುಭವನದಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸುವರು. ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸುವರು. ಸಂಸದ ಶಿವಕುಮಾರ ಉದಾಸಿ, ಶಾಸಕರಾದ ಶ್ರೀನಿವಾಸ ಮಾನೆ, ಬಸವರಾಜ ಶಿವಣ್ಣನವರ, ಯು.ಬಿ. ಬಣಕಾರ ಹಾಗೂ ಪ್ರಕಾಶ ಕೋಳಿವಾಡ ಮತ್ತಿತರರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.